ರಟ್ಟೀಹಳ್ಳಿ: ತಾಲ್ಲೂಕಿನ ಮೇದೂರು ಗ್ರಾಮದಲ್ಲಿ ಶುಕ್ರವಾರ ಸಂಜೆ 4.30ರ ಸುಮಾರಿಗೆ ಜಮೀನಿಗೆ ತೆರಳಿದ್ದ ಕೂಲಿ ಕಾರ್ಮಿಕರನ್ನು ಮರಳಿ ಮನೆಗೆ ಕರೆತರಲು ಟ್ರ್ಯಾಕ್ಟರ್ ಚಾಲನೆ ಮಾಡಿಕೊಂಡು ಹೋಗುತ್ತಿದ್ದ ಗ್ರಾಮದ ಮನೋಜ ಈರಣ್ಣ ತೋಟದ (23 ವರ್ಷ) ನಿಯಂತ್ರಣ ತಪ್ಪಿ ಟ್ರ್ಯಾಕ್ಟರ್ ಉರುಳಿಬಿದ್ದು ಸ್ಥಳದಲ್ಲಿಯೇ ಚಾಲಕ ಸಾವನ್ನಪ್ಪಿರುವ ಘಟನೆ ಜರುಗಿದೆ. ಈ ಕುರಿತು ರಟ್ಟೀಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.