ADVERTISEMENT

ಅಭಿವೃದ್ಧಿ ಯೋಜನೆ ಮನೆ ಮನೆಗೆ ತಲುಪಿಸಿ: ಸೋಮಣ್ಣ

​ಪ್ರಜಾವಾಣಿ ವಾರ್ತೆ
Published 20 ಏಪ್ರಿಲ್ 2024, 15:31 IST
Last Updated 20 ಏಪ್ರಿಲ್ 2024, 15:31 IST
ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಪಟ್ಟಣದ ರೇಣುಕಾ ಪ್ಯಾಲೇಸ್ ಸಭಾ ಭವನದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕೊಲೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು
ಶಿಗ್ಗಾವಿ ತಾಲ್ಲೂಕಿನ ಬಂಕಾಪುರ ಪಟ್ಟಣದ ರೇಣುಕಾ ಪ್ಯಾಲೇಸ್ ಸಭಾ ಭವನದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕೊಲೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಯಿತು   

ಶಿಗ್ಗಾವಿ: ಕಾಂಗ್ರೆಸ್ ಸರ್ಕಾರ ಬಡವರ, ಕೂಲಿ ಕಾರ್ಮಿಕರ, ಹಿಂದುಳಿದ ಜನರಿಗಾಗಿ ಅಭಿವೃದ್ಧಿ ಯೋಜನೆಗಳನ್ನು ಜಾರಿಗೆ ತಂದಿದೆ. ಅವುಗಳನ್ನು ಮನೆ, ಮನೆಗೆ ತಲುಪಿಸುವ ಕಾರ್ಯವನ್ನು ಕಾರ್ಯಕರ್ತರು ಮಾಡಬೇಕು ಎಂದು ಕರ್ನಾಟಕ ಗಡಿ ಪ್ರದೇಶದ ಅಭಿವೃದ್ಧಿ ನಿಗಮದ ಅಧ್ಯಕ್ಷ ಸೋಮಣ್ಣ ಬೇವಿನಮರದ ಹೇಳಿದರು.

ತಾಲ್ಲೂಕಿನ ಬಂಕಾಪುರ ಪಟ್ಟಣದ ರೇಣುಕಾ ಪ್ಯಾಲೇಸ್ ಸಭಾ ಭವನದಲ್ಲಿ ಶನಿವಾರ ನಡೆದ ಕಾಂಗ್ರೆಸ್ ಕಾರ್ಯಕರ್ತರ ಸಭೆಯಲ್ಲಿ ಕೊಲೆಯಾದ ವಿದ್ಯಾರ್ಥಿನಿ ನೇಹಾ ಹಿರೇಮಠ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದರು.

ರಾಜ್ಯದಲ್ಲಿ ಗ್ಯಾರಂಟಿ ಯೋಜನೆಗಳು ಜನಮನಕ್ಕೆ ಮುಟ್ಟಿದ್ದು, ಕಾರ್ಯಕರ್ತರು ಮನೆಗಳಿಗೆ ಭೇಟಿ ನೀಡಿ ಅವುಗಳನ್ನು ಮತ್ತೆ ನೆನಪಿಸುವ ಮೂಲಕ ಮತಯಾಚಿಸಬೇಕು. ಬಿಜೆಪಿಯು ಕಾಂಗ್ರೆಸ್ ಅಭಿವೃದ್ಧಿ ಸಹಿಸಲಾಗದೆ ಸುಳ್ಳು ಭರವಸೆ ನೀಡುತ್ತಿದೆ. ಹೀಗಾಗಿ ನಾವೇ ಕಾಂಗ್ರೆಸ್ ಅಭ್ಯರ್ಥಿ ಎಂದು ಭಾವಿಸಿ ಮತಯಾಚನೆ ಮಾಡಬೇಕು ಎಂದರು.

ADVERTISEMENT

ಕಾಂಗ್ರೆಸ್ ಮುಖಂಡ ಯಾಸೀರಖಾನ್ ಪಠಾಣ ಮಾತನಾಡಿ, ಚುನಾವಣೆ ಪ್ರಚಾರದಲ್ಲಿ ಯುವ ಕಾರ್ಯಕರ್ತರ ಶ್ರಮ ಮುಖ್ಯವಾಗಿದೆ. ಸ್ಥಳೀಯ ಸಂಸ್ಥೆಗಳ ಚುನಾವಣೆಗಳಂತೆ ಮನೆ, ಮನೆಗಳಿಗೆ ಹೋಗಿ ಪ್ರಚಾರ ಮಾಡಬೇಕು ಎಂದು ಹೇಳಿದರು.

ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ ಬಿ.ಸಿ.ಪಾಟೀಲ, ಸವಣೂರ ತಾಲ್ಲೂಕಿನ ಅಧ್ಯಕ್ಷ ಜೆ.ಎಂ.ಮುಲ್ಲಾ, ಅಂಜುನ್ ಸಂಸ್ಥೆ ಅಧ್ಯಕ್ಷ ಮಹ್ಮದ ಖತೀಬ, ಮುಖಂಡರಾದ ರಾಜೇಶ್ವರಿ ಪಾಟೀಲ, ಶಿವಾನಂದ ರಾಮಗೇರಿ, ಶಂಭಣ್ಣ ಆಜೂರ, ಎಂ.ಎನ್.ಹೊನ್ನಕೇರಿ, ಪುರಸಭೆ ಸದಸ್ಯರಾದ ಎಂ.ಎಂ.ಖಾಜಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.