ADVERTISEMENT

ಪ್ರಜಾವಾಣಿ ವರದಿ ಫಲಶ್ರುತಿ: ಹಿಮ್ಸ್‌ಗೆ 35 ಬೋಧಕರ ಅಂತಿಮ ಆಯ್ಕೆ ಪಟ್ಟಿ ಬಿಡುಗಡೆ

​ಪ್ರಜಾವಾಣಿ ವಾರ್ತೆ
Published 4 ಮಾರ್ಚ್ 2023, 14:30 IST
Last Updated 4 ಮಾರ್ಚ್ 2023, 14:30 IST
‘150 ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ’ ಎಂಬ ಶೀರ್ಷಿಕೆಯಲ್ಲಿ ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ ಪ್ರಕಟಿಸಲಾಗಿತ್ತು.
‘150 ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ’ ಎಂಬ ಶೀರ್ಷಿಕೆಯಲ್ಲಿ ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ ಪ್ರಕಟಿಸಲಾಗಿತ್ತು.   

ಹಾವೇರಿ: ಇಲ್ಲಿಯ ಹಾವೇರಿ ವೈದ್ಯಕೀಯ ವಿಜ್ಞಾನಗಳ ಸಂಸ್ಥೆ (ಹಿಮ್ಸ್‌) ಕಾಲೇಜಿಗೆ ಸಂಬಂಧಿಸಿದ 35 ಕಾಯಂ ಬೋಧಕರ ಅಂತಿಮ ಆಯ್ಕೆ ಪಟ್ಟಿಯನ್ನು ಶನಿವಾರ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

79 ಕಾಯಂ ಬೋಧಕರ ಹುದ್ದೆಗಳ ನೇಮಕಾತಿಗೆ 2022ರ ಜನವರಿ 19ರಿಂದ 21ರವರೆಗೆ ಸಂದರ್ಶನ ನಡೆಸಲಾಗಿತ್ತು. ನಂತರ 2022ರ ಡಿಸೆಂಬರ್‌ 9ರಂದು 37 ಹುದ್ದೆಗಳ ತಾತ್ಕಾಲಿಕ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿತ್ತು. ಈಗ ಪ್ರಾಧ್ಯಾಪಕ, ಸಹ ಪ್ರಾಧ್ಯಾಪಕ ಮತ್ತು ಸಹಾಯಕ ಪ್ರಾಧ್ಯಾಪಕ ಹುದ್ದೆಗಳಿಗೆ ಸಂಬಂಧಿಸಿದಂತೆ ಒಟ್ಟು 35 ಬೋಧಕರ ನೇಮಕಾತಿಯ ಅಂತಿಮ ಆಯ್ಕೆ ಪಟ್ಟಿಯನ್ನು ಪ್ರಕಟಿಸಲಾಗಿದೆ.

‘ಆಯ್ಕೆಗೊಂಡ ಬೋಧಕರು ಇನ್ನೊಂದು ವಾರದೊಳಗೆ ಆದೇಶ ಪತ್ರ ಪಡೆದು ಕಾಲೇಜಿಗೆ ಹಾಜರಾಗಲಿದ್ದು, ತರಗತಿಗಳು ಪೂರ್ಣ ಪ್ರಮಾಣದಲ್ಲಿ ನಡೆಯುತ್ತವೆ’ ಎಂಬ ಆಶಾಭಾವನೆಯನ್ನು ವಿದ್ಯಾರ್ಥಿಗಳು ವ್ಯಕ್ತಪಡಿಸಿದ್ದಾರೆ.

ADVERTISEMENT

‘150 ವೈದ್ಯಕೀಯ ವಿದ್ಯಾರ್ಥಿಗಳ ಭವಿಷ್ಯ ಅತಂತ್ರ’ ಎಂಬ ಶೀರ್ಷಿಕೆಯಲ್ಲಿ ‘ಪ್ರಜಾವಾಣಿ’ಯಲ್ಲಿ ವಿಶೇಷ ವರದಿ ಪ್ರಕಟಿಸಲಾಗಿತ್ತು. ಬೋಧಕರ ಕೊರತೆಯಿಂದ ಪಾಠಗಳು ನಡೆಯದ ಬಗ್ಗೆ ಹಾಗೂ ಎರಡು ತಿಂಗಳು ಕಳೆದರೂ ಬೋಧಕರ ಅಂತಿಮ ಪಟ್ಟಿ ಬಿಡುಗಡೆಯಾಗದ ಬಗ್ಗೆ ವರದಿಯಲ್ಲಿ ಬೆಳಕು ಚೆಲ್ಲಲಾಗಿತ್ತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.