ADVERTISEMENT

ಸ್ವಾತಂತ್ರ್ಯ ಹೋರಾಟಗಾರರ ಪುಣ್ಯ ಸ್ಮರಣೆ: ಏಕಕಾಲದಲ್ಲಿ 75 ರಾಷ್ಟ್ರಧ್ವಜಾರೋಹಣ

​ಪ್ರಜಾವಾಣಿ ವಾರ್ತೆ
Published 14 ಫೆಬ್ರುವರಿ 2021, 8:31 IST
Last Updated 14 ಫೆಬ್ರುವರಿ 2021, 8:31 IST
75 ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.
75 ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮ ನೆರವೇರಿಸಲಾಯಿತು.   

ಹಾವೇರಿ: ಸ್ವಾತಂತ್ರ್ಯ ಹೋರಾಟಗಾರ ಷಡಕ್ಷರಪ್ಪ ಮಹಾರಾಜಪೇಟ ಹಾಗೂ ಪಾರ್ವತಮ್ಮ ಷಡಕ್ಷರಪ್ಪ ಮಹಾರಾಜಪೇಟ ಇವರ 7ನೇ ವರ್ಷದ ಪುಣ್ಯ ಸ್ಮರಣೋತ್ಸವ ಅಂಗವಾಗಿ ನಗರದ ಮೈಲಾರ ಮಹದೇವಪ್ಪ ಸ್ಮಾರಕ ಭವನದ ಆವರಣದಲ್ಲಿ ಭಾನುವಾರ ಏಕಕಾಲಕ್ಕೆ 75 ರಾಷ್ಟ್ರಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.

ಕರ್ನಾಟಕ ರಾಜ್ಯ ಸ್ವಾತಂತ್ರ್ಯ ಹೋರಾಟಗಾರರ ಹಾಗೂ ಉತ್ತರಾಧಿಕಾರಿಗಳ ಸಂಘ ಹಾಗೂ ಬ್ಯಾಡಗಿಯ ಷಡಕ್ಷರಪ್ಪ ರುದ್ರಪ್ಪ ಮಹಾರಾಜಪೇಟ ಪ್ರತಿಷ್ಠಾನದ ಆಶ್ರಯದಲ್ಲಿ ಸ್ವಾತಂತ್ರ್ಯ ಹೋರಾಟಗಾರರಿಗೆ ಸನ್ಮಾನ, ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಹಾಗೂ ರಾಜ್ಯದ ವಿವಿಧ ಕ್ಷೇತ್ರಗಳಲ್ಲಿ ಸೇವೆ ಸಲ್ಲಿಸಿದ ಸಾಧಕರಿಗೆ ಸನ್ಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಹುಕ್ಕೇರಿ ಮಠದ ಸದಾಶಿವ ಸ್ವಾಮೀಜಿ ಸಾನ್ನಿಧ್ಯದಲ್ಲಿ ನಡೆದ ಕಾರ್ಯಕ್ರಮದಲ್ಲಿ ದೇಶದ ವಿವಿಧ ಭಾಗಗಳಿಂದ ಸ್ವಾತಂತ್ರ್ಯ ಹೋರಾಟಗಾರರು ಮತ್ತು ಅವರ ಕುಟುಂಬಸ್ಥರು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಹುತಾತ್ಮ ಮೈಲಾರ ಮಹದೇವಪ್ಪ ಮತ್ತು ಧರ್ಮಪತ್ನಿ ಸಿದ್ದಮ್ಮ ಮೈಲಾರಪ್ಪ ಅವರ ಸಮಾಧಿಗಳಿಗೆ ಪೂಜೆ ಸಲ್ಲಿಸಲಾಯಿತು.

ADVERTISEMENT
ಹುತಾತ್ಮ ಮೈಲಾರ ಮಹದೇವಪ್ಪ ಅವರ ಸಮಾಧಿಗೆ ಗಣ್ಯರಿಂದ ಪೂಜೆ ನೆರವೇರಿತು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.