ADVERTISEMENT

ಹಾವೇರಿ: ಜಿಲ್ಲಾಸ್ಪತ್ರೆಯಲ್ಲಿ ಸ್ಕ್ಯಾನಿಂಗ್‌ ಸೆಂಟರ್‌ ಪುನರಾರಂಭ

ಪ್ರಜಾವಾಣಿ ವಿಶೇಷ ವರದಿಗೆ ಜಿಲ್ಲಾಡಳಿತ ಸ್ಪಂದನೆ

​ಪ್ರಜಾವಾಣಿ ವಾರ್ತೆ
Published 10 ಮೇ 2022, 13:32 IST
Last Updated 10 ಮೇ 2022, 13:32 IST
ಹಾವೇರಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಅಲ್ಟ್ರಾಸೌಂಡ್‌ ಸ್ಕ್ಯಾನಿಂಗ್‌ ಸೆಂಟರ್‌ ಪುನರಾರಂಭಗೊಂಡಿರುವ ದೃಶ್ಯ  –ಪ್ರಜಾವಾಣಿ ಚಿತ್ರ 
ಹಾವೇರಿಯ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಅಲ್ಟ್ರಾಸೌಂಡ್‌ ಸ್ಕ್ಯಾನಿಂಗ್‌ ಸೆಂಟರ್‌ ಪುನರಾರಂಭಗೊಂಡಿರುವ ದೃಶ್ಯ  –ಪ್ರಜಾವಾಣಿ ಚಿತ್ರ    

ಹಾವೇರಿ: ನಗರದ ಜಿಲ್ಲಾಸ್ಪತ್ರೆಯ ಆವರಣದಲ್ಲಿರುವ ಮಹಿಳಾ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ‘ಅಲ್ಟ್ರಾಸೌಂಡ್‌ ಸ್ಕ್ಯಾನಿಂಗ್‌ ಸೆಂಟರ್‌’ ಏಪ್ರಿಲ್‌ 30ರಿಂದ ಪುನರಾರಂಭಗೊಂಡಿದ್ದು, ಬಡ ಗರ್ಭಿಣಿಯರು ನೆಮ್ಮದಿಯ ನಿಟ್ಟುಸಿರು ಬಿಟ್ಟಿದ್ದಾರೆ.

ರೇಡಿಯಾಲಜಿಸ್ಟ್‌ ಅನಾರೋಗ್ಯದ ನಿಮಿತ್ತ 58 ದಿನ ರಜೆ ಮೇಲೆ ಹೋಗಿದ್ದ ಕಾರಣ, ಎರಡು ತಿಂಗಳು ಸ್ಕ್ಯಾನಿಂಗ್‌ ಸೆಂಟರ್‌ಗೆ ಬೀಗ ಹಾಕಲಾಗಿತ್ತು. ಇದರಿಂದ ಬಡ ಗರ್ಭಿಣಿಯರು ತೀವ್ರ ಪರದಾಡುವಂತಾಗಿತ್ತು.

ಮಗುವಿನ ಬೆಳವಣಿಗೆ ತಿಳಿದುಕೊಳ್ಳಲು ಪ್ರತಿ ಗರ್ಭಿಣಿ ಒಟ್ಟು ಐದು ಬಾರಿ ಸ್ಕ್ಯಾನಿಂಗ್‌ ಮಾಡಿಸುವ ಅಗತ್ಯ ಇರುತ್ತದೆ. ಖಾಸಗಿ ಸ್ಕ್ಯಾನಿಂಗ್‌ ಸೆಂಟರ್‌ಗಳಲ್ಲಿ ದುಬಾರಿ ಶುಲ್ಕ ಭರಿಸಲಾಗದೆ ಬಡವರು ಮತ್ತು ಕೂಲಿಕಾರ್ಮಿಕ ಕುಟುಂಬಗಳು ಕಂಗಾಲಾಗಿದ್ದವು.

ADVERTISEMENT

ಈ ಕುರಿತು ‘ಪ್ರಜಾವಾಣಿ’ಯಲ್ಲಿ ‘2 ತಿಂಗಳಿಂದ ಸ್ಕ್ಯಾನಿಂಗ್‌ ಸೆಂಟರ್‌ ಬಂದ್‌’ ಶೀರ್ಷಿಕೆಯಡಿ ವಿಶೇಷ ವರದಿ ಪ್ರಕಟಿಸಲಾಗಿತ್ತು. ವರದಿಗೆ ಸ್ಪಂದಿಸಿದ ಜಿಲ್ಲಾಡಳಿತ ಮತ್ತು ಆರೋಗ್ಯ ಇಲಾಖೆ ಅಧಿಕಾರಿಗಳು ಸ್ಕ್ಯಾನಿಂಗ್‌ ಸೆಂಟರ್‌ ಅನ್ನು ಪುನರಾರಂಭ ಮಾಡಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.