ADVERTISEMENT

ಹಾವೇರಿ: ಸಮರ್ಪಕ ಬಸ್‌ ಸೌಲಭ್ಯಕ್ಕೆ ಮನವಿ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2021, 13:12 IST
Last Updated 5 ಆಗಸ್ಟ್ 2021, 13:12 IST
ಹಾವೇರಿ ತಾಲ್ಲೂಕಿನ ಗಾಂಧಿಪುರ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸಬೇಕು ಎಂದು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸಾರಿಗೆ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು 
ಹಾವೇರಿ ತಾಲ್ಲೂಕಿನ ಗಾಂಧಿಪುರ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸಬೇಕು ಎಂದು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಸಾರಿಗೆ ವ್ಯವಸ್ಥಾಪಕರಿಗೆ ಮನವಿ ಸಲ್ಲಿಸಿದರು    

ಹಾವೇರಿ: ತಾಲ್ಲೂಕಿನಗಾಂಧಿಪುರ ಗ್ರಾಮದಲ್ಲಿರುವ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿಗೆ ಬರುವ ವಿದ್ಯಾರ್ಥಿಗಳಿಗೆ ಸಮರ್ಪಕ ಬಸ್‌ ಸೌಲಭ್ಯ ಕಲ್ಪಿಸಬೇಕು ಎಂದು ಎಬಿವಿಪಿ ನೇತೃತ್ವದಲ್ಲಿ ವಿದ್ಯಾರ್ಥಿಗಳು ಒತ್ತಾಯಿಸಿದರು.

ಪ್ರತಿದಿನ ಎರಡು ಸಾವಿರಕ್ಕೂ ಹೆಚ್ಚು ವಿದ್ಯಾರ್ಥಿಗಳು ಗ್ರಾಮೀಣ ಪ್ರದೇಶಗಳಿಂದ ಈ ಕಾಲೇಜಿಗೆ ಬರುತ್ತಾರೆ. ಅವರಿಗೆ ಕಾಲೇಜಿಗೆ ಬರಲು ಮತ್ತು ಹೋಗಲು ಸರಿಯಾದ ಸಮಯದಲ್ಲಿ ಬಸ್ಸಿನ ವ್ಯವಸ್ಥೆ ಇಲ್ಲ. ಹಾವೇರಿ–ಗಾಂಧಿಪುರ ಮಾರ್ಗಕ್ಕೆ ಹೆಚ್ಚಿನ ಬಸ್ಸುಗಳನ್ನು ಬಿಡಬೇಕು ಎಂದು ಮನವಿ ಮಾಡಿದರು.

ಹೂವಿನಹಡಗಲಿಯಿಂದ ಹಾವೇರಿ ಮಾರ್ಗವಾಗಿ ತೆರಳುವ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮ ಮಂಡಳಿಯ ಬಸ್ಸುಗಳನ್ನು ಗಾಂಧಿಪುರ ಕಾಲೇಜು ಬಳಿ ನಿಲುಗಡೆ ಮಾಡಬೇಕು ಹಾಗೂ ವಿದ್ಯಾರ್ಥಿಗಳಿಗೆ ಹತ್ತಲು ಅವಕಾಶ ಕಲ್ಪಿಸಬೇಕು ಎಂದು ಅಖಿಲ ಭಾರತೀಯ ವಿದ್ಯಾರ್ಥಿ ಪರಿಷತ್ ಪದಾಧಿಕಾರಿಗಳು ಒತ್ತಾಯಿಸಿದರು.

ADVERTISEMENT

ಜಿಲ್ಲಾ ಸಂಚಾಲಕರಾದ ಗಂಗಾಧರ ಕುಲಕರ್ಣಿ, ತಾಲ್ಲೂಕು ಸಂಚಾಲಕ ವಿಶ್ವನಾಥ್, ತಾಲ್ಲೂಕು ಸಹಸಂಚಾಲಕ ಮೇಘನಾಥ, ನಗರ ಕಾರ್ಯದರ್ಶಿ ಸಂತೋಷ್, ವರುಣ, ರೋಹನ್, ಕಾರ್ತಿಕ್, ಸಿದ್ದು, ಪ್ರಸನ್ನ ಕೋರಿ, ಲಿಂಗರಾಜ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.