ADVERTISEMENT

ಗುರುತಿನ ಚೀಟಿ ವಿತರಣೆಗೆ ಆಗ್ರಹ

​ಪ್ರಜಾವಾಣಿ ವಾರ್ತೆ
Published 25 ಸೆಪ್ಟೆಂಬರ್ 2020, 16:20 IST
Last Updated 25 ಸೆಪ್ಟೆಂಬರ್ 2020, 16:20 IST
ಹಾವೇರಿಯ ಜಿಲ್ಲಾಡಳಿತ ಭವನದ ಮುಂಭಾಗ ಶುಕ್ರವಾರ ಶ್ರಮಶಕ್ತಿ ಕಟ್ಟಡ ಕಾರ್ಮಿಕರ ಯೂನಿಯನ್‌ ಸದಸ್ಯರು ಪ್ರತಿಭಟನೆ ನಡೆಸಿದರು 
ಹಾವೇರಿಯ ಜಿಲ್ಲಾಡಳಿತ ಭವನದ ಮುಂಭಾಗ ಶುಕ್ರವಾರ ಶ್ರಮಶಕ್ತಿ ಕಟ್ಟಡ ಕಾರ್ಮಿಕರ ಯೂನಿಯನ್‌ ಸದಸ್ಯರು ಪ್ರತಿಭಟನೆ ನಡೆಸಿದರು    

ಹಾವೇರಿ: ಹೊಸ ಗುರುತಿನ ಚೀಟಿಗಾಗಿ ಎಲ್ಲ ದಾಖಲೆಗಳೊಂದಿಗೆ ಸೇವಾಸಿಂಧು ಆ್ಯಪ್‌ನಲ್ಲಿ ಅರ್ಜಿಗಳನ್ನು ಹಾಕಿದ್ದೇವೆ. ನಾಲ್ಕು ತಿಂಗಳಾದರೂ ಕಾರ್ಮಿಕ ಇಲಾಖೆ ಅನುಮೋದನೆ ನೀಡಿಲ್ಲ ಎಂದು ಆರೋಪಿಸಿ ಶ್ರಮಶಕ್ತಿ ಕಟ್ಟಡ ಕಾರ್ಮಿಕರ ಯೂನಿಯನ್ ಸದಸ್ಯರು ಹಾವೇರಿ ಜಿಲ್ಲಾಡಳಿತ ಭವನದ ಮುಂಭಾಗ ಶುಕ್ರವಾರ ಪ್ರತಿಭಟನೆ ನಡೆಸಿದರು.

ಕಟ್ಟಡ (ಗೌಂಡಿ) ಕಾರ್ಮಿಕರು ಇಲಾಖೆಗೆ ಅಲೆದಾಡಬಾರದು ಎಂದು ಆನ್‌ಲೈನ್‌ ಮಾಡಲಾಗಿದೆ ಎಂದು ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಹೇಳುತ್ತದೆ. ಆದರೆ, ನಾಲ್ಕು ತಿಂಗಳಿಂದ ಕಾರ್ಮಿಕ ಇಲಾಖೆ ಅಧಿಕಾರಿಗಳನ್ನು ಭೇಟಿ ಮಾಡಿದರೆ ಹಲವಾರು ಸಮಸ್ಯೆಗಳನ್ನು ಹೇಳುತ್ತಾ, ಮುಂದಿನ ವಾರ ಬನ್ನಿ ಎನ್ನುತ್ತಾರೆ ಎಂದು ಆರೋಪಿಸಿದರು.

2019ರ ಸಾಲಿನ ಮದುವೆ ಸಹಾಯಧನ, ಸ್ಕಾಲರ್‌ಶಿಪ್‌ ಅನ್ನು ತಕ್ಷಣ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು. ಯೂನಿಯನ್‌ನ ಕರಿಬಸಪ್ಪ, ಹಸೀನಾ ಹೆಡಿಯಾಲ, ಹುಸೇನ್‌ಸಾಬ್‌ ಇತರರು ಇದ್ದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.