ADVERTISEMENT

ಹಾವೇರಿ: ಎರಡನೇ ಹಂತದ ಕೋವಿಡ್‌ ಲಸಿಕೆಗೆ ಚಾಲನೆ

​ಪ್ರಜಾವಾಣಿ ವಾರ್ತೆ
Published 1 ಮಾರ್ಚ್ 2021, 15:55 IST
Last Updated 1 ಮಾರ್ಚ್ 2021, 15:55 IST
ಬ್ಯಾಡಗಿ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಕೋವಿಡ್‌ ಲಸಿಕೆ ಪಡೆದರು 
ಬ್ಯಾಡಗಿ ಸರ್ಕಾರಿ ಆಸ್ಪತ್ರೆಯಲ್ಲಿ ಸೋಮವಾರ ಶಾಸಕ ವಿರೂಪಾಕ್ಷಪ್ಪ ಬಳ್ಳಾರಿ ಕೋವಿಡ್‌ ಲಸಿಕೆ ಪಡೆದರು    

ಹಾವೇರಿ: ‘ಜಿಲ್ಲೆಯಲ್ಲಿ ಸೋಮವಾರದಿಂದ ಎರಡನೇ ಹಂತರ ಕೋವಿಡ್ ಲಸಿಕೆ ಕೋವಿನ್– 2.0 ನೀಡಿಕೆ ಕಾರ್ಯಕ್ರಮ ಸೋಮವಾರದಿಂದ ಜಿಲ್ಲೆಯ ಆಯ್ದ ಏಳು ಸರ್ಕಾರಿ ಆರೋಗ್ಯ ಕೇಂದ್ರಗಳಲ್ಲಿ ಹಾಗೂ ಎರಡು ಖಾಸಗಿ ಆಸ್ಪತ್ರೆಗಳಲ್ಲಿ ಆರಂಭಿಸಲಾಗಿದೆ’ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.

ಸರ್ಕಾರಿ ಆಸ್ಪತ್ರೆಗಳಲ್ಲಿ ಉಚಿತವಾಗಿ ಹಾಗೂ ಖಾಸಗಿ ಆಸ್ಪತ್ರೆಗಳಲ್ಲಿ ₹250 ಪ್ರತಿ ಡೋಸ್‍ಗೆ ಶುಲ್ಕ ಪಾವತಿಸಿ ಲಸಿಕೆ ಪಡೆದುಕೊಳ್ಳಬಹುದು. 60 ವರ್ಷ ಮೇಲ್ಪಟ್ಟ ಎಲ್ಲಾ ಸಾರ್ವಜನಿಕರಿಗೆ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಹಾವೇರಿ ಜಿಲ್ಲಾ ಆಸ್ಪತ್ರೆ, ಬ್ಯಾಡಗಿ, ಹಾನಗಲ್, ಹಿರೇಕೆರೂರು, ರಾಣೆಬೆನ್ನೂರು, ಸವಣೂರು ಹಾಗೂ ಶಿಗ್ಗಾವಿ ತಾಲ್ಲೂಕು ಸಾರ್ವಜನಿಕ ಆಸ್ಪತ್ರೆಗಳಲ್ಲಿ ಕೋವಿಡ್ ಲಸಿಕೆಯನ್ನು ಉಚಿತವಾಗಿ ನೀಡಲಾಗುವುದು. ಹಾವೇರಿ ನಗರದ ವೀರಾಪುರ ಮಲ್ಟಿ ಸ್ಪೆಶಾಲಿಟಿ ಹಾಸ್ಟಿಟಲ್ ಹಾಗೂ ರಾಣೆಬೆನ್ನೂರ ನಗರದ ಓಂ ಹಾಸ್ಪಿಟಲ್‍ನಲ್ಲಿ ಕೋವಿಡ್ ಲಸಿಕೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.