ADVERTISEMENT

ನವೀನ್ ಪಾರ್ಥಿವ ಶರೀರ ತನ್ನಿ: ಸಿಎಂಗೆ ಸೆರಗೊಡ್ಡಿ ಬೇಡಿದ ತಾಯಿ

​ಪ್ರಜಾವಾಣಿ ವಾರ್ತೆ
Published 5 ಮಾರ್ಚ್ 2022, 14:52 IST
Last Updated 5 ಮಾರ್ಚ್ 2022, 14:52 IST
ಉಕ್ರೇನ್‍ನಲ್ಲಿ ಮೃತಪಟ್ಟ ರಾಣೆಬೆನ್ನೂರು ತಾಲ್ಲೂಕು ಚಳಗೇರಿಯ ವಿದ್ಯಾರ್ಥಿ ನವೀನ ಗ್ಯಾನಗೌಡರ ಮನೆಗೆ ಶನಿವಾರ ಭೇಟಿ ನೀಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ತಂದೆ–ತಾಯಿಗೆ ಸಾಂತ್ವನ ಹೇಳಿದರು. ವಚನಾನಂದ ಸ್ವಾಮೀಜಿ, ಶಾಸಕ ಅರುಣಕುಮಾರ್‌ ಪೂಜಾರ್‌, ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಇದ್ದಾರೆ

ಹಾವೇರಿ:‘ನನ್ನ ಮಗನ ಪಾರ್ಥಿವ ಶರೀರವನ್ನು ಬೇಗ ತನ್ನಿ. ಕೊನೆಯದಾಗಿ ಅವನ ಮುಖ ನೋಡಲು ಅವಕಾಶ ಕಲ್ಪಿಸಿಕೊಡಿ’ ಎಂದು ಕಣ್ಣೀರಿಡುತ್ತಾ ಉಕ್ರೇನ್‌ನಲ್ಲಿ ಮೃತಪಟ್ಟ ವಿದ್ಯಾರ್ಥಿ ನವೀನ ಗ್ಯಾನಗೌಡರ ತಾಯಿ ವಿಜಯಲಕ್ಷ್ಮಿ ಅವರು ಸೆರಗೊಡ್ಡಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಲ್ಲಿ ಬೇಡಿಕೊಂಡರು.

ತಂದೆ ಶೇಖರಪ್ಪ ಅವರಿಗೆ ರಾಜ್ಯ ಸರ್ಕಾರದ ವತಿಯಿಂದ ₹25 ಲಕ್ಷದ ಚೆಕ್‌ ವಿತರಿಸಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ‘ಪಾರ್ಥಿವ ಶರೀರ ತರಲು ಸರ್ವ ಪ್ರಯತ್ನ ಮಾಡುತ್ತಿದ್ದೇವೆ. ಆದಷ್ಟು ಬೇಗ ನಿಮ್ಮ ಬೇಡಿಕೆ ಈಡೇರಿಸುತ್ತೇವೆ. ದೊಡ್ಡ ಮಗ ಹರ್ಷ ಅವರ ಪಿಎಚ್‌ಡಿ ಮುಗಿದ ನಂತರ ಉತ್ತಮ ಉದ್ಯೋಗ ದೊರಕಿಸಿಕೊಡುತ್ತೇವೆ’ ಎಂದು ಸಿಎಂ ಸಾಂತ್ವನದ ನುಡಿಗಳನ್ನಾಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.