
ಪ್ರಜಾವಾಣಿ ವಾರ್ತೆ
ಹಾವೇರಿ: ಇಲ್ಲಿಯ ಹುಕ್ಕೇರಿಮಠದ ಸದಾಶಿವ ಸ್ವಾಮೀಜಿ ಅವರನ್ನು ‘ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು’ ಹಾಗೂ ‘ಚಿಂತನ ವೇದಿಕೆ’ ನೀಡುವ ‘ಭಾವೈಕ್ಯ ಶ್ರೀ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಪ್ರಕಟಣೆ ನೀಡಿರುವ ಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ, ‘ಮಠದಲ್ಲಿ ಮಾರ್ಚ್ 3ರಂದು ಬೆಳಿಗ್ಗೆ 11 ಗಂಟೆಗೆ ಲಿಂ. ಶಿವಲಿಂಗ ಸ್ವಾಮೀಜಿಯವರ ಜಯಂತಿ ಉತ್ಸವ ಸಂದರ್ಭದಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗುವುದು’ ಎಂದು ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.