ADVERTISEMENT

'ಚಿಲುಮೆ' ಅಶ್ವತ್ಥನಾರಾಯಣಗೆ ಸೇರಿದ್ದು, ಅವರನ್ನು ಬಂಧಿಸಿ: ಸಲೀಂ ಅಹಮದ್‌ ಆಗ್ರಹ

ಬಿಜೆಪಿಯವರು ಖೊಟ್ಟಿ ಮತದಾರರ ಧೀರರು

​ಪ್ರಜಾವಾಣಿ ವಾರ್ತೆ
Published 19 ನವೆಂಬರ್ 2022, 13:32 IST
Last Updated 19 ನವೆಂಬರ್ 2022, 13:32 IST
ಸಲೀಂ ಅಹಮದ್‌, ವಿಧಾನ ಪರಿಷತ್‌ ಸದಸ್ಯ
ಸಲೀಂ ಅಹಮದ್‌, ವಿಧಾನ ಪರಿಷತ್‌ ಸದಸ್ಯ   

ಹಾವೇರಿ: ‘ಮತಪಟ್ಟಿಗೆ ಕನ್ನ’ ಪ್ರಕರಣದಲ್ಲಿ ಸಚಿವರು ಮತ್ತು ಅಧಿಕಾರಿಗಳು ಶಾಮೀಲಾಗಿದ್ದಾರೆ.ಚಿಲುಮೆ ಸಂಸ್ಥೆಯು ಉನ್ನತ ಶಿಕ್ಷಣ ಸಚಿವ ಅಶ್ವತ್ಥನಾರಾಯಣ ಅವರಿಗೆ ಸೇರಿದ್ದು, ಕೂಡಲೇ ಅವರನ್ನು ಬಂಧಿಸಬೇಕು ಎಂದು ವಿಧಾನ ಪರಿಷತ್‌ ಸದಸ್ಯ, ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹಮದ್‌ ಒತ್ತಾಯಿಸಿದರು.

ಹಾವೇರಿ ನಗರಸಭೆಯಲ್ಲಿ ಶನಿವಾರ ತಮ್ಮ ಕಚೇರಿ ಉದ್ಘಾಟಿಸಿದ ನಂತರ ಮಾಧ್ಯಮದವರೊಂದಿಗೆ ಅವರು ಮಾತನಾಡಿ, ಮತದಾರರ ಪಟ್ಟಿಯ ಮಾಹಿತಿ ಕಳವು ಮಾಡುತ್ತಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಕೆಲವರನ್ನು ಪೊಲೀಸರು ಬಂಧಿಸಿದ್ದಾರೆ. ಮತಪಟ್ಟಿಗೆ ಕನ್ನ ಹಾಕಲು ಸರ್ಕಾರವೇ ಕುಮ್ಮಕ್ಕು ನೀಡಿದೆ. ಹೀಗಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ವಿರುದ್ಧ ತನಿಖೆ ಆಗಬೇಕು ಎಂದು ಆಗ್ರಹಿಸಿದರು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಗೆ ಸೋಲಿನ ಭೀತಿ ಕಾಡುತ್ತಿದೆ. ಅಲ್ಪಸಂಖ್ಯಾತರ, ಬಡವರ, ದಲಿತರ ಓಟುಗಳನ್ನು ಪಟ್ಟಿಯಿಂದ ತೆಗೆದುಹಾಕುವ ಹುನ್ನಾರ ನಡೆಸಿದ್ದಾರೆ. ಬಿಜೆಪಿಯವರು ಖೊಟ್ಟಿ ಮತದಾನದ ಧೀರರು. ನ್ಯಾಯಾಧೀಶರಿಂದ ತನಿಖೆ ಆಗಬೇಕು ಎಂದು ಒತ್ತಾಯಿಸಿದರು.

ADVERTISEMENT

‘ಸಿಎಂ ತವರು ಜಿಲ್ಲೆ’ ಹಾವೇರಿಯಲ್ಲಿ ಅತಿವೃಷ್ಟಿಯಿಂದ ಮನೆ ಕಳೆದುಕೊಂಡವರಿಗೆ ಪರಿಹಾರ ನೀಡಲು ₹50 ಸಾವಿರದಿಂದ ₹1 ಲಕ್ಷ ಲಂಚವನ್ನು ಅಧಿಕಾರಿಗಳು ಪಡೆದಿದ್ದಾರೆ. ಈ ಬಗ್ಗೆ ತನಿಖೆ ನಡೆಸಿ, ಅರ್ಹರಿಗೆ ಪರಿಹಾರ ಕಲ್ಪಿಸಬೇಕು, ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.