ADVERTISEMENT

ಹಾವೇರಿ | ₹ 8 ಲಕ್ಷ ಮೌಲ್ಯದ ಶ್ರೀಗಂಧ ಕಳವು

​ಪ್ರಜಾವಾಣಿ ವಾರ್ತೆ
Published 8 ಅಕ್ಟೋಬರ್ 2025, 5:23 IST
Last Updated 8 ಅಕ್ಟೋಬರ್ 2025, 5:23 IST
   

ಹಾವೇರಿ: ಜಿಲ್ಲೆಯ ಶಿಗ್ಗಾವಿ ತಾಲ್ಲೂಕಿನ ಹಿರೇಮಣಕಟ್ಟಿ ಬಳಿಯ ಜಮೀನಿನಲ್ಲಿದ್ದ ಶ್ರೀಗಂಧದ 10 ಮರಗಳನ್ನು ಕಳ್ಳತನ ಮಾಡಲಾಗಿದ್ದು, ಈ ಬಗ್ಗೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಹಿರೇಮಣಕಟ್ಟಿ ಗ್ರಾಮದ ನಿವಾಸಿ ಮಂಜುನಾಥಗೌಡ ಗೋಟಗೊಡಿ ಅವರು ಮರ ಕಳ್ಳತನ ಬಗ್ಗೆ ದೂರು ನೀಡಿದ್ದಾರೆ. ಅಪರಿಚಿತರ ವಿರುದ್ಧ ಎಫ್‌ಐಆರ್ ದಾಖಲಿಸಿಕೊಂಡು, ತನಿಖೆ ಮುಂದುವರಿಸಲಾಗಿದೆ’ ಎಂದು ಶಿಗ್ಗಾವಿ ಪೊಲೀಸರು ತಿಳಿಸಿದರು.

‘ದೂರುದಾರರು ತಮ್ಮ ಜಮೀನಿನಲ್ಲಿ ಶ್ರೀಗಂಧದ ಮರಗಳನ್ನು ಬೆಳೆಸಿದ್ದಾರೆ. ಸೆ. 20ರಿಂದ 28ರವರೆಗಿನ ಅವಧಿಯಲ್ಲಿ ಯಾರೋ ಕಳ್ಳರು, ಜಮೀನಿನ ಒಳಗೆ ನುಗ್ಗಿ ₹ 8 ಲಕ್ಷ ಮೌಲ್ಯದ ಶ್ರೀಗಂಧದ 10 ಮರಗಳನ್ನು ಕಡಿದುಕೊಂಡು ಹೋಗಿದ್ದಾರೆ. ಕರಗಸ ಬಳಸಿ ಆರೋಪಿಗಳು ಕೃತ್ಯ ಎಸಗಿದ್ದು, ಅವರನ್ನು ಪತ್ತೆ ಮಾಡಲಾಗುತ್ತಿದೆ’ ಎಂದು ಹೇಳಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.