ADVERTISEMENT

ಸಂತ್ರಸ್ತರ ಹೆಸರಿನಲ್ಲಿ ಸಂಘ – ಸಂಸ್ಥೆಗಳು ಚಂದಾ ಸಂಗ್ರಹಿಸಬೇಡಿ : ಡಿ.ಸಿ

ಕೊಡಗು ನಿರಾಶ್ರಿತರ ಪರಿಹಾರಕ್ಕೆ ಜಿಲ್ಲೆಯ ಸರ್ಕಾರಿ ನೌಕರರ ಒಂದು ದಿನ ವೇತನ

​ಪ್ರಜಾವಾಣಿ ವಾರ್ತೆ
Published 20 ಆಗಸ್ಟ್ 2018, 16:33 IST
Last Updated 20 ಆಗಸ್ಟ್ 2018, 16:33 IST
ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. 
ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ.    

ಹಾವೇರಿ:ಪ್ರಕೃತಿ ವಿಕೋಪ ಸಂತ್ರಸ್ತರ ಹೆಸರಿನಲ್ಲಿ ಯಾವುದೇ ಸಂಘ– ಸಂಸ್ಥೆಗಳು ಸಾರ್ವಜನಿಕರಿಂದ ಚಂದಾ ಸಂಗ್ರಹಿಸಬಾರದು ಎಂದು ಜಿಲ್ಲಾಧಿಕಾರಿ ಡಾ.ವೆಂಕಟೇಶ್ ಎಂ.ವಿ. ಸೂಚನೆ ನೀಡಿದ್ದಾರೆ.

ಸಂಘ –ಸಂಸ್ಥೆ ಅಥವಾ ವ್ಯಕ್ತಿಗಳು ವೈಯಕ್ತಿಕವಾಗಿ ದಾನ ನೀಡಬಹುದು. ಸಂತ್ರಸ್ತರಿಗೆ ನೆರವು ನೀಡಲು ಇಚ್ಛಿಸಿದ ದಾನಿಗಳು, ಸಂಘ, ಸಂಸ್ಥೆಗಳು ನೇರವಾಗಿ ಮುಖ್ಯಮಂತ್ರಿಗಳ ಪರಿಹಾರ ನಿಧಿ ಅಥವಾ ಜಿಲ್ಲಾಧಿಕಾರಿ ಕಚೇರಿಯಲ್ಲಿರುವ ಖಾತೆಗೆ ಹಣ ತಲುಪಿಸಬೇಕು. ಯಾವುದೇ ಬೇರೆ ಖಾತೆಗಳು ಅಥವಾ ವ್ಯಕ್ತಿಗಳಿಗೆ ತಲುಪಿಸುವಂತಿಲ್ಲ ಎಂದು ತಿಳಿಸಿದ್ದಾರೆ.

ಚಂದಾ ಸಂಗ್ರಹ ದುರುಪಯೋಗಗೊಂಡಘಟನೆಗಳು ವರದಿಯಾದ ಹಿನ್ನೆಲೆಯಲ್ಲಿ ಸರ್ಕಾರವು ಸ್ಪಷ್ಟ ಸೂಚನೆ ನೀಡಿದೆ ಎಂದು ಅವರು ತಿಳಿಸಿದ್ದಾರೆ.

ಒಂದು ದಿನದ ವೇತನ:ಜಿಲ್ಲೆಯ ಎಲ್ಲ ಹಿರಿಯ ಹಾಗೂ ಕಿರಿಯ ನೌಕರರ ಸರ್ಕಾರಿ ನೌಕರರ ನಿರ್ಧಾರದಂತೆ ಒಂದು ದಿನದ ವೇತನನ್ನು ಪರಿಹಾರ ಕಾರ್ಯಕ್ಕೆ ನೀಡಲು ನಿರ್ಧರಿಸಲಾಗಿದೆ. ಅದರೊಂದಿಗೆ ನಿರ್ಮಿತಿ ಕೇಂದ್ರದಿಂದ ₹5 ಲಕ್ಷ ಪರಿಹಾರ ನೀಡಲಾಗುವುದು ಎಂದು ಅವರು ವಿವರಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.