
ಸವಣೂರು: ತಾಲ್ಲೂಕಿನ ಸುಕ್ಷೇತ್ರ ಮಂತ್ರವಾಡಿಯ ಜಗದ್ಗುರು ರೇವಣಸಿದ್ದೇಶ್ವರರ ಜಾತ್ರಾ ಮಹೋತ್ಸವ, ಲಿಂ.ಕೆಂಜಡೇಶ್ವರ ಶಿವಾಚಾರ್ಯ ಸ್ವಾಮೀಜಿ ಪುಣ್ಯಾರಾಧನೆ ನಿಮಿತ್ತ ಶ್ರೀಮಠದ ಪೀಠಾಧ್ಯಕ್ಷ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಉತ್ಸವ ಹಾಗೂ ಪಾರ್ವತಿ ರಥೋತ್ಸವ ಸಕಲ ವಾಧ್ಯ ವೈಭವದೊಂದಿಗೆ ಸೋಮವಾರ ಅದ್ಧೂರಿಯಾಗಿ ಜರುಗಿತು.
ಮಹಿಳೆಯರಿಗೆ ಸಮಾನತೆ ಕಲ್ಪಿಸುವ ಉದ್ದೇಶದಿಂದ ಲಿಂ.ಕೆಂಜಡೇಶ್ವರ ಸ್ವಾಮೀಜಿ ನೇತೃತ್ವದಲ್ಲಿ ಆರಂಭವಾದ ರಥೋತ್ಸವದಲ್ಲಿ ಮಹಿಳೆಯರು ಮಾತ್ರ ರಥ ಎಳೆದಿರುವುದು ವಿಷೇಶವಾಗಿ ಕಂಡು ಬಂದಿತು. ಈ ಪರಂಪರೆಯನ್ನು ಪೀಠಾಧ್ಯಕ್ಷ ಸಿದ್ದರಾಮೇಶ್ವರ ಶಿವಾಚಾರ್ಯ ಸ್ವಾಮೀಜಿ ಮುನ್ನಡೆಸುತ್ತ ಬಂದಿದ್ದಾರೆ.
ರಥೋತ್ಸವ ಉದ್ದಕ್ಕೂ ಹರಹರ ಮಹಾದೇವ ಎಂಬ ಜಯಘೋಷಗಳೊಂದಿಗೆ ಭಕ್ತರು ರಥಕ್ಕೆ ಉತ್ತತ್ತಿ, ಬಾಳೆಹಣ್ಣು ಎಸೆದು ಭಕ್ತಿ ಸಮರ್ಪಿಸಿದರು. ಮಹಿಳೆಯರು ಹರಕೆ ಕಟ್ಟಿಕೊಂಡರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.