ಸವಣೂರ: ತಾಲ್ಲೂಕು ಒಕ್ಕಲುತನ ಹುಟ್ಟುವಳಿ ಮಾರಾಟ ಸಹಕಾರಿ ಸಂಘದ ಆಡಳಿತ ಮಂಡಳಿಯ ಅವಧಿ ಮುಕ್ತಾಯಗೊಂಡಿದ್ದು ಮುಂದಿನ ಐದು ವರ್ಷಗಳ ಅವಧಿಗೆ ಆಡಳಿತ ಮಂಡಳಿ ಸದಸ್ಯರ ಚುನಾವಣೆ ಅ.24ಕ್ಕೆ ನಡೆಯಲಿದೆ.
ಈ ಕುರಿತು ಪ್ರಕಟಣೆಯಲ್ಲಿ ಮಾಹಿತಿ ನೀಡಿರುವ ಚುನಾವಣಾ ಅಧಿಕಾರಿ ಚಂದ್ರಶೇಖರ ಭಜಂತ್ರಿ, ಸವಣೂರಟಿಎಪಿಎಂಸಿಎ ಒಟ್ಟು 13 ಸ್ಥಾನಗಳನ್ನು ಹೊಂದಿದ್ದು, ಅದರಲ್ಲಿ ‘ಅ’ ವರ್ಗದ ಸದಸ್ಯರ ಮತಕ್ಷೇತ್ರದಿಂದ (ಸದಸ್ಯ ಸಹಕಾರ ಸಂಘಗಳು) 5 ಸ್ಥಾನ, ‘ಬ’ ವರ್ಗದ ಸದಸ್ಯರ ಮತಕ್ಷೇತ್ರದಿಂದ 8 ಸ್ಥಾನಗಳಿಗೆ ಚುನಾವಣೆ ನಡೆಯಲಿದೆ.
ಅ.9 ರಿಂದ ಅ.16 ವರೆಗೆ ನಾಮಪತ್ರ ಸಲ್ಲಿಕೆ. ಅ.17ರಂದು ನಾಮಪತ್ರಗಳ ಪರಿಶೀಲನೆ ನಂತರ ಉಮೇದುವಾರರ ಪಟ್ಟಿ ಪ್ರಕಟವಾಗಲಿದೆ. ಅ.18 ರಂದು ನಾಮಪತ್ರಗಳನ್ನು ಹಿಂಪಡೆಯಲು ಕೊನೆಯ ದಿನವಾಗಿದೆ.
ಅ.24 ರಂದು ಬೆಳಿಗ್ಗೆ 10ರಿಂದ ಮಧ್ಯಾಹ್ನ 4 ಗಂಟೆಯವರೆಗೆ ಸಂಘದ ಕಾರ್ಯಾಲಯದಲ್ಲಿ ಮತದಾನ ನಡೆಯಲಿದ್ದು, ನಂತರ ಮತಗಳ ಎಣಿಕೆ ಮತ್ತು ಫಲಿತಾಂಶ ಘೋಷಣೆಯಾಗಲಿದೆ ಎಂದು ಅವರು ತಿಳಿಸಿದ್ದಾರೆ.
ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್ಬುಕ್ ಪುಟ ಫಾಲೋ ಮಾಡಿ.