ಸವಣೂರು: ಭಾರತೀಯ ಪ್ರಜೆಗಳು ಒಗ್ಗೂಡಿ ಸುಭದ್ರ ರಾಷ್ಟ್ರ ನಿರ್ಮಾಣದ ಪಣ ತೊಡಬೇಕಿದೆ ಎಂದು ಉಪವಿಭಾಗಾಧಿಕಾರಿ ಶುಭಂ ಶುಕ್ಲಾ ಹೇಳಿದರು.
ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಸ್ವಾತಂತ್ರ್ಯೋತ್ಸವದ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು.
ವಿವಿಧ ಶಾಲಾ ವಿದ್ಯಾರ್ಥಿಗಳಿಗೆ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು. ರಾಷ್ಟ್ರದ ಸ್ವಾತಂತ್ರ್ಯಕ್ಕೆ ಪ್ರಾಣ ತೆತ್ತ ಮಹನೀಯರ ವೇಷಭೂಷಣ ತೊಟ್ಟ ಮಕ್ಕಳ ಸ್ತಬ್ಧಚಿತ್ರಗಳ ಪ್ರದರ್ಶನ ನಡೆಯಿತು.
ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಅತಿ ಹೆಚ್ಚು ಅಂಕಗಳಿಸಿ ತಾಲ್ಲೂಕಿಗೆ ಪ್ರಥಮ, ದ್ವೀತಿಯ, ತೃತೀಯ ಸ್ಥಾನ ಗಳಿಸಿದ ವಿಧ್ಯಾರ್ಥಿಗಳಿಗೆ ಲ್ಯಾಪ್ ಟಾಪ್ ವಿತರಣೆ ಮಾಡಲಾಯಿತು.
ತಹಶೀಲ್ದಾರ್ ರವಿಕುಮಾರ ಕೊರವರ, ಗ್ರೇಡ್ 2 ತಹಶೀಲ್ದಾರ್ ಗಣೇಶ ಸವಣೂರ, ಸರ್ಕಾರಿ ನೌಕರರ ಸಂಘದ ಅದ್ಯಕ್ಷ ಬಸವರಾಜ ಹೊಸಮನಿ, ಪುರಸಭೆ ಮುಖ್ಯಾದಿಖಾರಿ ನೀಲಪ್ಪ ಹಾದಿಮನಿ, ತಾಲ್ಲೂಕು ಪಂಚಾಯಿತಿ ಇಒ ಬಿ.ಎಸ್. ಶಿಡೇನೂರ, ಸಿಪಿಐ ದೇವಾನಂದ ಎಸ್., ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಜೆ. ಮುಲ್ಲಾ, ಗ್ಯಾರಂಟಿ ಅನಿಷ್ಠಾನ ಸಮೀತಿ ತಾಲ್ಲೂಕು ಘಟಕದ ಅಧ್ಯಕ್ಷ ಸುಭಾಸ ಮಜ್ಜಗಿ, ಪುರಸಭೆ ಅಧ್ಯಕ್ಷ ಅಲ್ಲಾವುದೀನ ಮನಿಯಾರ, ಜೀಶಾನ ಪಠಾಣ, ಕೆಡಿಪಿ ಸದಸ್ಯ ರವಿ ಕರಿಗಾರ, ಗಂಗಾಧರ ಬಾಣದ, ಮಹೇಶ ಸಾಲಿಮಠ, ಕರವೇ ಸ್ವಾಬಿಮಾನ ಬಣ ಅಧ್ಯಕ್ಷ ಹರೀಶ ಪಾಟೀಲ, ರಾಮಣ್ಣ ಅಗಸರ, ಪರಶುರಾಮ ಇಳಗೇರ, ಪ್ರಕಾಶ ಜಮಾದರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.