ADVERTISEMENT

ಪರಿಸರ ರಕ್ಷಣೆ ಎಲ್ಲರ ಹೊಣೆ: ಡಾ.ಪುಟ್ಟರಾಜು

​ಪ್ರಜಾವಾಣಿ ವಾರ್ತೆ
Published 6 ಜೂನ್ 2021, 2:00 IST
Last Updated 6 ಜೂನ್ 2021, 2:00 IST
ಬ್ಯಾಡಗಿ ತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡಲಾಯಿತು. ಅಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪುಟ್ಟರಾಜು ಇದ್ದಾರೆ
ಬ್ಯಾಡಗಿ ತಾಲ್ಲೂಕು ಆಸ್ಪತ್ರೆ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡಲಾಯಿತು. ಅಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪುಟ್ಟರಾಜು ಇದ್ದಾರೆ   

ಬ್ಯಾಡಗಿ: ನಮ್ಮ ಸುತ್ತಲಿನ ಪರಿಸರ ಕಲುಷಿತವಾಗದಂತೆ ನೋಡಿಕೊಳ್ಳುವುದು ಪ್ರತಿಯೊಬ್ಬರ ಕರ್ತವ್ಯ ಎಂದು ತಾಲ್ಲೂಕು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ.ಪುಟ್ಟರಾಜು ಹೇಳಿದರು.

ಶನಿವಾರ ಪಟ್ಟಣದ ತಾಲ್ಲೂಕು ಆಸ್ಪತ್ರೆಯ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಸಸಿ ನೆಡುವ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಜನರ ಉತ್ತಮ ಆರೋಗ್ಯಕ್ಕೆ ಶುದ್ಧವಾದ ಗಾಳಿ ಅಗತ್ಯವಿದೆ. ಪರಿಸರದ ಬಗ್ಗೆ ನಿರ್ಲಕ್ಷ್ಯ ತೋರಿದರೆ ಭವಿಷ್ಯದಲ್ಲಿ ಬೆಲೆ ತೆರಬೇಕಾಗುತ್ತದೆ ಎಂದು ಎಚ್ಚರಿಸಿದರು.

ವಿವಿಧ ಜಾತಿಯ ಮರಗಿಡಗಳನ್ನು ಬೆಳೆಸುವುದರಿಂದ ಆಸ್ಪತ್ರೆಗೆ ಬರುವವರಿಗೆ ಶುದ್ಧವಾದ ಗಾಳಿ ಹಾಗೂ ಹಸಿರು ವಾತಾವರಣ ದೊರೆಯಲಿದೆ ಎಂದು ಹೇಳಿದರು.

ADVERTISEMENT

ಡಾ.ಎಸ್.ನಾಗರಾಜ, ಡಾ.ವಿರೇಶ ಹೊಸಮನಿ, ಡಾ.ಶ್ರೀನಿವಾಸ್‌, ಡಾ.ರಮೇಶ, ಡಾ.ಚಂದ್ರಕಾಂತ, ಡಾ.ಎಸ್.ಜಿ.ಸತ್ಯಮೂರ್ತಿ ಹಾಗೂ ಸಿಬ್ಬಂದಿ ಉಪಸ್ಥಿತರಿದ್ದರು.

ಸಾಂಕೇತಿಕ ಚಾಲನೆ: ಪಟ್ಟಣದ ವಲಯ ಅರಣ್ಯಾಧಿಕಾರಿ ಕಚೇರಿ ಆವರಣದಲ್ಲಿ ವಿಶ್ವ ಪರಿಸರ ದಿನಾಚರಣೆಯನ್ನು ಸಾಂಕೇತಿಕವಾಗಿ ಆಚರಿಸಲಾಯಿತು. ವಲಯ ಅರಣ್ಯಾಧಿಕಾರಿ ಮಹೇಶ ಮರೆಣ್ಣನನವರ ಮಾತನಾಡಿ ಕೋವಿಡ್ 2ನೇ ಅಲೆ ತಡೆಯುವ ನಿಟ್ಟಿನಲ್ಲಿ ಪರಿಸರ ದಿನಾಚರಣೆಯನ್ನು ಸಾಂಕೇತಿಕವಾಗಿ ಆಚರಿಸಲಾಗುತ್ತಿದೆ. ತಾಲ್ಲೂಕಿನಲ್ಲಿ ಹೆಚ್ಚು ಗಿಡಮರಗಳನ್ನು ಬೆಳೆಸುವ ಸಂಕಲ್ಪ ಮಾಡಲಾಗಿದ್ದು, ಸಾರ್ವಜನಿಕರ ಸಹಕಾರ ಅಗತ್ಯವಾಗಿದೆ ಎಂದು ಹೇಳಿದರು.

ಸಹಾಯಕ ಅರಣ್ಯಾಧಿಕಾರಿ ವಸಂತ ಪಾಟೀಲ, ಶಂಭಯ್ಯ ನುದೇನೂರಮಠ, ಎಂ.ಎಂ.ಪೂಜಾರ, ಜಗದೀಶ ದಿವಟರ, ನಾಗರಾಜ ಮಣ್ಣನವರ, ಎಂ.ಎ.ಇಟಗಿ, ಹನುಮಂತಪ್ಪ ತೆವರಿ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.