ADVERTISEMENT

ಹಾವೇರಿ: ಸವಿತಾ ಮಹರ್ಷಿ ಜಯಂತ್ಯುತ್ಸವ ಸಂಭ್ರಮ

​ಪ್ರಜಾವಾಣಿ ವಾರ್ತೆ
Published 28 ಜನವರಿ 2026, 7:53 IST
Last Updated 28 ಜನವರಿ 2026, 7:53 IST
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ  ಸವಿತಾ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು
ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ  ಸವಿತಾ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಲಾಯಿತು   

ಹಾವೇರಿ: ಸವಿತಾ ಮಹರ್ಷಿ ಜಯಂತ್ಯುತ್ಸವವನ್ನು ಜಿಲ್ಲೆಯಾದ್ಯಂತ ಮಂಗಳವಾರ ಅರ್ಥಪೂರ್ಣವಾಗಿ ಆಚರಿಸಲಾಯಿತು.

ಸರ್ಕಾರಿ ಕಚೇರಿಗಳು, ಸಮಾಜದ ಮುಖಂಡರು, ಸವಿತಾ ಮಹರ್ಷಿ ಅವರ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ನಮಿಸಿದರು.

ಹಾವೇರಿ ಜಿಲ್ಲಾಧಿಕಾರಿ ಕಚೇರಿ ಸಭಾಭವನದಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ಸವಿತಾ ಮಹರ್ಷಿ ಜಯಂತ್ಯುತ್ಸವ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ವಿಜಯ ಮಹಾಂತೇಶ ದಾನಮ್ಮನವರ ಪಾಲ್ಗೊಂಡಿದ್ದರು.

ADVERTISEMENT

ಸವಿತಾ ಮಹರ್ಷಿ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಭಕ್ತಿಪೂರ್ವಕವಾಗಿ ನಮಿಸಿದರು. ಸರಳ ಹಾಗೂ ಅರ್ಥಪೂರ್ಣವಾಗಿ ಕಾರ್ಯಕ್ರಮ ನಡೆಸಲಾಯಿತು.

ಹೆಚ್ಚುವರಿ ಜಿಲ್ಲಾಧಿಕಾರಿ ನಾಗರಾಜ ಎಲ್., ತಹಶೀಲ್ದಾರ ಶರಣಮ್ಮ, ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ಸಮಾಜದ ಮುಖಂಡರು ಹಾಜರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.