ADVERTISEMENT

ಹಾವೇರಿ | ಶಾಲಾ ಬಾಲಕಿ ಮೇಲೆ ದೌರ್ಜನ್ಯ: ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 10 ಆಗಸ್ಟ್ 2025, 4:54 IST
Last Updated 10 ಆಗಸ್ಟ್ 2025, 4:54 IST
ಖಾಸಗಿ ಶಾಲೆಯೊಂದರ ವಿದ್ಯಾರ್ಥಿ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಖಂಡಿಸಿ ಹಾವೇರಿಯಲ್ಲಿ ಎಸ್ಎಫ್ಐ ಹಾಗೂ ಡಿವೈಎಫ್ಐ  ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು
ಖಾಸಗಿ ಶಾಲೆಯೊಂದರ ವಿದ್ಯಾರ್ಥಿ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಖಂಡಿಸಿ ಹಾವೇರಿಯಲ್ಲಿ ಎಸ್ಎಫ್ಐ ಹಾಗೂ ಡಿವೈಎಫ್ಐ  ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು   

ಹಾವೇರಿ: ತಾಲ್ಲೂಕಿನ ಖಾಸಗಿ ಶಾಲೆಯೊಂದರ ವಿದ್ಯಾರ್ಥಿ ಮೇಲೆ ನಡೆದಿರುವ ಲೈಂಗಿಕ ದೌರ್ಜನ್ಯ ಖಂಡಿಸಿ ಭಾರತ ವಿದ್ಯಾರ್ಥಿ ಫೆಡರೇಷನ್‌ (ಎಸ್ಎಫ್ಐ) ಹಾಗೂ ಭಾರತ ಪ್ರಜಾಸತ್ತಾತ್ಮಕ ಯುವಜನ ಫೆಡರೇಷನ್‌ (ಡಿವೈಎಫ್ಐ) ಪದಾಧಿಕಾರಿಗಳು ನಗರದಲ್ಲಿ ಪ್ರತಿಭಟನೆ ನಡೆಸಿದರು.

ನಗರದ ಹೊಸಮನಿ ಸಿದ್ದಪ್ಪ ವೃತ್ತದಲ್ಲಿ ಸೇರಿದ್ದ ಪ್ರತಿಭಟನಾಕಾರರು, ‘ಕೃತ್ಯ ಎಸಗಿರುವ ಶಿಕ್ಷಕನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು’ ಎಂದು ಘೋಷಣೆ ಕೂಗಿದರು.

‘15 ವರ್ಷದ ವಿದ್ಯಾರ್ಥಿನಿ ಮೇಲೆ ಶಿಕ್ಷಕ ದೌರ್ಜನ್ಯ ಎಸಗಿದ್ದಾನೆ. ಈ ಬಗ್ಗೆ ದೂರು ನೀಡಿದರೂ ಶಾಲಾ ಆಡಳಿತ ಮಂಡಳಿ ನಿರ್ಲಕ್ಷ್ಯ ವಹಿಸಿದೆ. ನೊಂದ ಪೋಷಕರು, ಠಾಣೆಗೆ ದೂರು ನೀಡಿದ್ದಾರೆ. ಇಂಥ ಘಟನೆ ಗಮನಕ್ಕೆ ಬಂದರೂ ಪ್ರತಿಕ್ರಿಯಿಸದ ಆಡಳಿತ ಮಂಡಳಿ ವಿರುದ್ಧವೂ ಕ್ರಮ ಜರುಗಿಸಬೇಕು’ ಎಂದು ಪ್ರತಿಭಟನಕಾರರು ದೂರಿದರು.

ADVERTISEMENT

‘ಗುರುವಿಗೆ ಗೌರವದ ಸ್ಥಾನವಿದೆ. ಇಂಥ ಗುರು ಸ್ಥಾನಕ್ಕೆ ಇಂಗ್ಲಿಷ್ ಶಿಕ್ಷಕ ಚ್ಯುತಿ ತಂದಿದ್ದಾನೆ. ಈತನ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಮುಂದಿನ ದಿನಗಳಲ್ಲಿ ಯಾರೊಬ್ಬರೂ ಇಂಥ ಕೃತ್ಯ ಎಸಗದಂತೆ ಎಚ್ಚರಿಕೆ ರವಾನಿಸಬೇಕು’ ಎಂದು ಹೇಳಿದರು.

‘ರಾಜ್ಯದ ಹಲವು ಜಿಲ್ಲೆಯಲ್ಲಿ ವಿದ್ಯಾರ್ಥಿನಿಯರು, ಮಹಿಳೆಯರ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯಗಳು ನಡೆಯುತ್ತಿವೆ. ಶಾಲಾ–ಕಾಲೇಜು, ವಸತಿ ನಿಲಯ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ವಿದ್ಯಾರ್ಥಿನಿಯರು, ಮಹಿಳೆಯರಿಗೆ ಸೂಕ್ತ ರಕ್ಷಣೆ ಒದಗಿಸಬೇಕು’ ಎಂದು ಆಗ್ರಹಿಸಿದರು.

ಡಿವೈಎಫ್ಐ ರಾಜ್ಯ ಕಾರ್ಯದರ್ಶಿ ಬಸವರಾಜ ಪೂಜಾರ, ಎಸ್ಎಫ್ಐ ಜಿಲ್ಲಾ ಘಟಕದ ಅಧ್ಯಕ್ಷ ಬಸವರಾಜ ಎಸ್., ಮಂಜುಳಾ ಎಸ್. ಅಕ್ಕಿ, ತಿಪ್ಪೇಸ್ವಾಮಿ ಹೊಸಮನಿ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.