ರಟ್ಟೀಹಳ್ಳಿ: ಪಟ್ಟಣ ಲಯನ್ಸ್ ಶಾಲಾ ಆವರಣದಲ್ಲಿ ಮಂಗಳವಾರ ವಿಜ್ಞಾನ ವಸ್ತು ಪ್ರದರ್ಶನ ಜರುಗಿತು.
ವಸ್ತು ಪ್ರದರ್ಶನವನ್ನು ರಟ್ಟೀಹಳ್ಳಿ ಸಮುದಾಯ ಆರೋಗ್ಯ ಕೇಂದ್ರ ವೈದ್ಯಾಧಿಕಾರಿ ಡಾ. ಲೋಕೇಕುಮಾರ ಉದ್ಘಾಟನೆ ಮಾಡಿ ಮಾತನಾಡಿ, ಮಕ್ಕಳಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನದ ಕುರಿತಾದ ಪರಿಕಲ್ಪನೆ ಮೂಡಿಸಲು ವಿಜ್ಞಾನ ವಸ್ತು ಪ್ರದರ್ಶನ ಬಹಳಷ್ಟು ಅನುಕೂಲವಾಗಲಿದೆ ಎಂದರು.
ಲಯನ್ಸ್ ಶಿಕ್ಷಣ ಸಂಸ್ಥೆಯ ಅಧ್ಯಕ್ಷ ಎನ್.ಸಿ.ಕಠಾರೆ, ಲಯನ್ಸ್ ಕ್ಲಬ್ ಅಧ್ಯಕ್ಷ ಸಂದೀಪ ಪಾಟೀಲ, ಶಿಕ್ಷಣ ಇಲಾಖೆ ಅಧಿಕಾರಿಗಳು ಸೇರಿದಂತೆ ಲಯನ್ಸ್ ಕ್ಲಬ್ ಸದಸ್ಯರು ಹಾಗೂ ಶಾಲಾ ಶಿಕ್ಷಕರು, ವಿದ್ಯಾರ್ಥಿಗಳು ವಸ್ತು ಪ್ರದರ್ಶನದಲ್ಲಿ ಪಾಲ್ಗೊಂಡಿದ್ದರು. ಸಂಜೆ 4 ಗಂಟೆವರೆಗೆ ಸಾರ್ವಜನಿಕರು ಸೇರಿದಂತೆ ಬೇರೆ, ಬೇರೆ ಶಾಲಾ ವಿದ್ಯಾರ್ಥಿಗಳು ವಿಜ್ಞಾನ ವಸ್ತುಪ್ರದರ್ಶನ ವೀಕ್ಷಣೆ ಮಾಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.