ADVERTISEMENT

ದ್ವಿತೀಯ ದರ್ಜೆ ಸಹಾಯಕಿ ಅಮಾನತು

​ಪ್ರಜಾವಾಣಿ ವಾರ್ತೆ
Published 16 ಸೆಪ್ಟೆಂಬರ್ 2020, 16:11 IST
Last Updated 16 ಸೆಪ್ಟೆಂಬರ್ 2020, 16:11 IST

ಹಾವೇರಿ: ನಗರದ ತಹಶೀಲ್ದಾರ್‌ ಕಚೇರಿಯ ದ್ವಿತೀಯ ದರ್ಜೆ ಸಹಾಯಕಿ ಗೌರಮ್ಮ ಬಾರ್ಕಿ ಅವರನ್ನು ಜಿಲ್ಲಾಧಿಕಾರಿ ಆದೇಶದ ಮೇರೆಗೆ ಬುಧವಾರ ಕರ್ತವ್ಯದಿಂದ ಬಿಡುಗಡೆ ಮಾಡಲಾಗಿದೆ ಎಂದು ತಹಶೀಲ್ದಾರ್‌ ಶಂಕರ್‌ಜಿ.ಎಸ್‌. ತಿಳಿಸಿದ್ದಾರೆ.

ನಾಲ್ಕೈದು ತಿಂಗಳ ಹಿಂದೆ ಲಂಚ ಪ್ರಕರಣಕ್ಕೆ ಸಂಬಂಧಿಸಿದಂತೆ ಎಸಿಬಿ ದಾಳಿ ನಡೆದಿತ್ತು. ಈ ಸಂಬಂಧ ಇಲಾಖೆ ವಿಚಾರಣೆಯನ್ನು ಕಾಯ್ದಿರಿಸಿ ಅಮಾನತುಗೊಳಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT