ADVERTISEMENT

ದೇಶದ್ರೋಹಿಗಳಿಗೆ ತಕ್ಕ ಶಾಸ್ತಿ: ಸಚಿವ ಕೋಟಾ ಶ್ರೀನಿವಾಸ ಪೂಜಾರಿ

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2020, 14:51 IST
Last Updated 26 ಫೆಬ್ರುವರಿ 2020, 14:51 IST
ಸಚಿವ ಕೋಟಾ ಶ್ರೀನಿವಾಸ ಪೂಜಾರಿ
ಸಚಿವ ಕೋಟಾ ಶ್ರೀನಿವಾಸ ಪೂಜಾರಿ   

ಹಾವೇರಿ: ಈ ದೇಶದ ಅನ್ನ ತಿಂದು, ನೀರು ಕುಡಿದು ಪಾಕಿಸ್ತಾನಕ್ಕೆ ಜಯವಾಗಲಿ ಎಂಬ ಘೋಷಣೆ ಕೂಗುವುದನ್ನು ಸಹಿಸಲು ಸಾಧ್ಯವಿಲ್ಲ. ದೇಶದ್ರೋಹಿ ಚಟುವಟಿಕೆ ಮತ್ತು ಭಯೋತ್ಪಾದನೆ ಚಟುವಟಿಕೆಯಲ್ಲಿ ತೊಡಗಿರುವವರ ವಿರುದ್ಧ ತಕ್ಕ ಶಾಸ್ತಿ ಮಾಡಲಾಗುವುದು ಎಂದು ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.

ಬುಧವಾರ ಮಾಧ್ಯಮದವರೊಂದಿಗೆ ಮಾತನಾಡಿ, ‘ಸಂಸತ್‌ನಲ್ಲಿ ಬಹುಮತ ಸಿಕ್ಕಿರುವ ಸಿಎಎ ಕಾಯ್ದೆಯನ್ನು ಸರ್ವರೂ ಗೌರವಿಸಬೇಕು. ಸರ್ಕಾರಕ್ಕೆ ಕೆಟ್ಟ ಹೆಸರು ತರಲು ಕೆಲವರು ಷಡ್ಯಂತ್ರ ಮಾಡುತ್ತಿದ್ದಾರೆ. ದೇಶದ್ರೋಹಿ ಚಟುವಟಿಕೆಗೆ ಕುಮ್ಮಕ್ಕು ನೀಡುತ್ತಿರುವವರ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಲಾಗುತ್ತದೆ’ ಎಂದರು.

ದೊಡ್ಡಣ್ಣನಿಂದ ಮೆಚ್ಚುಗೆ:

ADVERTISEMENT

ಪಾಕ್‌ ಆಕ್ರಮಿತ ಕಾಶ್ಮೀರ, ಸಿಎಎ ಭಾರತದ ಆಂತರಿಕ ವಿಚಾರ ಎಂಬುದನ್ನು ವಿಶ್ವದ ದೊಡ್ಡಣ್ಣ ಎನಿಸಿರುವ ಅಮೆರಿಕದ ಅಧ್ಯಕ್ಷ ಟ್ರಂಪ್‌ ಒಪ್ಪಿಕೊಂಡಿದ್ದಾರೆ. ಭಾರತದ ನೀತಿಯನ್ನು ಇಡೀ ಪ್ರಪಂಚ ಒಪ್ಪಿಕೊಂಡಿದ್ದು, ದೇಶದ ಗೌರವ ಹೆಚ್ಚಿದ ಎಂದು ಹೇಳಿದರು.

ರಾಜ್ಯ ರಾಜಕಾರಣದಲ್ಲಿ ಬಿ.ಎಸ್‌.ಯಡಿಯೂರಪ್ಪ ಅವರನ್ನು ಸರಿಗಟ್ಟುವ ಮತ್ತೊಬ್ಬ ನಾಯಕರಿಲ್ಲ. ಸರ್ವಶ್ರೇಷ್ಠ ಮುಖ್ಯಮಂತ್ರಿಯಾಗಿದ್ದಾರೆ ಎಂದು ಹಾಡಿ ಹೊಗಳಿದರು.

ಸಚಿವ ಸ್ಥಾನ ಸಿಗುವ ಭರವಸೆ:

6 ಜನರಿಗೆ ಸಚಿವ ಸ್ಥಾನ ಕೊಡಲು ಸಂಪುಟದಲ್ಲಿ ಅವಕಾಶವಿದೆ. ಪಕ್ಷದ ವರಿಷ್ಠರು ಎಲ್ಲ ಸಮುದಾಯಗಳಿಗೆ ಸ್ಥಾನ ನೀಡಲಿದ್ದಾರೆ. ಮುಂದಿನ ಸಂಪುಟ ವಿಸ್ತರಣೆಯಲ್ಲಿ ಸಚಿವ ಸ್ಥಾನ ಸಿಗುವ ಭರವಸೆ ಇದೆ ಎಂದು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.