ಹಾವೇರಿ:ನಗರದ ವೇದಾಂತ (ಪರಿವರ್ತನಾ) ಪಿ.ಯು ಕಾಲೇಜಿನ ವಿದ್ಯಾರ್ಥಿಗಳು ಜಿ.ಎಚ್. ಕಾಲೇಜಿನಲ್ಲಿ ಈಚೆಗೆ ನಡೆದ ತಾಲ್ಲೂಕು ಮಟ್ಟದ ಸಾಂಸ್ಕೃತಿಕಹಾಗೂ ಸಹ ಪಠ್ಯ ಚಟುವಟಿಕೆಗಳ ಸ್ಪರ್ಧೆಗಳಲ್ಲಿ ಉತ್ತಮ ಸಾಧನೆ ಮಾಡಿ, ಜಿಲ್ಲಾಮಟ್ಟಕ್ಕೆ ಆಯ್ಕೆಯಾಗಿದ್ದಾರೆ.
ಚಿತ್ರಕಲೆ ಸ್ಫರ್ಧೆಯಲ್ಲಿ ನಿಶಾಂತ ಬಳಿಗೇರ ಪ್ರಥಮ, ಕನ್ನಡ ಪ್ರಬಂಧ ಸ್ಪರ್ಧೆಯಲ್ಲಿ ಸಮೀರ್ ಜಾತಗೇರ ಪ್ರಥಮ, ಏಕಪಾತ್ರಾಭಿನಯ ಸ್ಪರ್ಧೆಯಲ್ಲಿ ಗಂಗಾಧರ ಕಾಯಕದ ಪ್ರಥಮ, ಜಾನಪದ ಗೀತೆ ಗಾಯನ ಸ್ಪರ್ಧೆಯಲ್ಲಿ ಸುರೇಖಾ ಪಾಟೀಲ ತೃತೀಯ ಸ್ಥಾನ ಗಳಿಸಿದ್ದಾರೆ ಎಂದುಪ್ರಾಚಾರ್ಯ ಕೆ.ಜಿ.ಪಾಟೀಲ ಪ್ರಕಟಣೆ ತಿಳಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.