ADVERTISEMENT

ಹಾವೇರಿ ವಿಶ‍್ವವಿದ್ಯಾಲಯ ಕಬಡ್ಡಿ ತಂಡಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 26 ಸೆಪ್ಟೆಂಬರ್ 2025, 3:06 IST
Last Updated 26 ಸೆಪ್ಟೆಂಬರ್ 2025, 3:06 IST
ಹಾವೇರಿ ವಿಶ್ವವಿದ್ಯಾಲಯ
ಹಾವೇರಿ ವಿಶ್ವವಿದ್ಯಾಲಯ   

ರಟ್ಟೀಹಳ್ಳಿ: ಪಟ್ಟಣದ ಪ್ರಿಯದರ್ಶಿನಿ ಮಹಾವಿದ್ಯಾಲಯದ ವಿದ್ಯಾರ್ಥಿಗಳಾದ ಮೌನೇಶ ಕಮ್ಮಾರ, ವಿಜಯಕುಮಾರ ಜಗದೀಶಸಿಂಗ್ ಇವರು 2025-26ನೇ ಸಾಲಿನ ಹಾವೇರಿ ವಿಶ್ವವಿದ್ಯಾಲಯದ ಪುರುಷರ ಕಬಡ್ಡಿ ತಂಡಕ್ಕೆ ಆಯ್ಕೆಯಾಗಿದ್ದಾರೆ.

ಬೆಳಗಾವಿ ಚನ್ನಮ್ಮ ವಿಶ್ವವಿದ್ಯಾಲಯದಲ್ಲಿ ನಡೆಯಲಿರುವ ಅಖಿಲ ಭಾರತ ದಕ್ಷಿಣ ವಲಯ ಅಂತರ ವಿಶ್ವವಿದ್ಯಾಲಯದ ಕಬಡ್ಡಿ ಪಂದ್ಯದಲ್ಲಿ ಹಾವೇರಿ ವಿಶ್ವವಿದ್ಯಾಲಯವನ್ನು ಪ್ರತಿನಿಧಿಸಲಿದ್ದಾರೆ. ಕ್ರೀಡಾಸಾಧನೆಗೈದ ವಿದ್ಯಾರ್ಥಿಗಳಿಗೆ ವಿದ್ಯಾಸಂಸ್ಥೆಯ ಆಡಳಿತ ಮಂಡಳಿ, ಪ್ರಾಚಾರ್ಯ, ದೈಹಿಕ ನಿರ್ದೇಶಕ ಹಾಗೂ ಸಿಬ್ಬಂದಿ ವರ್ಗ ಅಭಿನಂದಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT