ADVERTISEMENT

ರಟ್ಟೀಹಳ್ಳಿ: ರಾಷ್ಟ್ರಮಟ್ಟದ ಕ್ರೀಡಾಕೂಟಕ್ಕೆ ಆಯ್ಕೆ

​ಪ್ರಜಾವಾಣಿ ವಾರ್ತೆ
Published 21 ಮೇ 2025, 13:39 IST
Last Updated 21 ಮೇ 2025, 13:39 IST
ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡ ಕ್ರೀಡಾಪಟುಗಳು////
ರಾಜ್ಯ ಸರ್ಕಾರಿ ನೌಕರರ ಕ್ರೀಡಾಕೂಟದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡ ಕ್ರೀಡಾಪಟುಗಳು////   

ರಟ್ಟೀಹಳ್ಳಿ: ಶಿವಮೊಗ್ಗದಲ್ಲಿ ಮೇ 18ರಿಂದ 20ರವರೆಗೆ ಜರುಗಿದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ರಾಜ್ಯಮಟ್ಟದ ಕ್ರೀಡಾಕೂಟದಲ್ಲಿ ತಾಲ್ಲೂಕಿನ ಮಾಸೂರು ಸಮುದಾಯ ಆರೋಗ್ಯ ಕೇಂದ್ರದ ಸಿಬ್ಬಂದಿ ಉತ್ತಮ ಸಾಧನೆ ಮಾಡಿದ್ದಾರೆ.

ವಾಹನ ಚಾಲಕ ಕುಬೇರ ಓಲೇಕಾರ ಅವರು 91 ಕೆ.ಜಿ. ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಗಳಿಸಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಡಿ ವರ್ಗದ ನೌಕರ ಗಿರೀಶ ಚಿಂದಿ ಅವರು 91 ಕೆ.ಜಿ. ವಿಭಾಗದ ಭಾರ ಎತ್ತುವ ಸ್ಪರ್ಧೆಯಲ್ಲಿ ತೃತೀಯ ಸ್ಥಾನ ಪಡೆದಿದ್ದಾರೆ ಎಂದು ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಮಲ್ಲೇಶ್ ಕರಿಗಾರ, ಸಂಘಟನಾ ಕಾರ್ಯದರ್ಶಿ ದೀಪಕ್ ಕಾಲ್ಪಲ್, ಮಾಸೂರು ಆಸ್ಪತ್ರೆಯ ಆಡಳಿತ ವೈದ್ಯಾಧಿಕಾರಿ ಡಾ. ನೀಲಕಂಠ ಸ್ವಾಮಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT