ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿಚಿಕ್ಕಣಜಿ ತಾಂಡಾದ ನಿವಾಸಿ ಮುಖೇಶ ಲಮಾಣಿ ಎಂಬಾತನಿಗೆ 12 ವರ್ಷಗಳ ಕಠಿಣ ಶಿಕ್ಷೆ ಹಾಗೂ ₹8 ಸಾವಿರ ದಂಡ ವಿಧಿಸಿ ಮಂಗಳವಾರ ಜಿಲ್ಲಾ ಸೆಷನ್ಸ್ ಎಫ್.ಟಿ.ಎಸ್.ಸಿ-(ಪೋಕ್ಸೊ) ವಿಶೇಷ ನಾಯಾಲಯದ ನ್ಯಾಯಾಧೀಶರಾದ ಕೆ.ಎಸ್. ಜ್ಯೋತಿಶ್ರೀ ಆದೇಶ ನೀಡಿದ್ದಾರೆ.
ಆರೋಪಿಯು 2014ರ ನವೆಂಬರ್‌ನಲ್ಲಿ ಬಾಲಕಿಯನ್ನು ಅಪಹರಿಸಿಕೊಂಡು ಹೋಗಿ, ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತಂತೆ ಬ್ಯಾಡಗಿ ತಾಲ್ಲೂಕು ಕಾಗಿನೆಲೆ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಈ ಪ್ರಕರಣ ಕುರಿತಂತೆ ಬ್ಯಾಡಗಿ ಇನ್‌ಸ್ಪೆಕ್ಟರ್ ಹಾಲಮೂರ್ತಿರಾವ್ ತನಿಖೆ ನಡೆಸಿ, ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.
ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ವಿನಾಯಕ ಎಸ್.ಪಾಟೀಲ ವಾದ ಮಂಡಿಸಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.