ADVERTISEMENT

ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿಗೆ 10 ವರ್ಷ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 15 ಜುಲೈ 2022, 16:30 IST
Last Updated 15 ಜುಲೈ 2022, 16:30 IST
ಪ್ರಾತಿನಿಧಿಕ ಚಿತ್ರ 
ಪ್ರಾತಿನಿಧಿಕ ಚಿತ್ರ    

ಹಾವೇರಿ: ಎಂಟು ತಿಂಗಳಿಂದ ಬಾಲಕಿಯ ಮೇಲೆ ನಿರಂತರವಾಗಿ ಲೈಂಗಿಕ ದೌರ್ಜನ್ಯ ಎಸಗಿ, ಐದು ತಿಂಗಳ ಗರ್ಭವತಿಯನ್ನಾಗಿ ಮಾಡಿದ ಪ್ರಕರಣದಲ್ಲಿ ಅಪರಾಧಿಯಲ್ಲಪ್ಪ ಹನುಮಂತಪ್ಪ ಕಾಳಿಗೆ (65) ಹತ್ತು ವರ್ಷ ಜೈಲು ಶಿಕ್ಷೆ ಹಾಗೂ ₹20 ಸಾವಿರ ದಂಡವನ್ನು ಹಾವೇರಿಯ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ (ಶೀಘ್ರಗತಿ ನ್ಯಾಯಾಲಯ–1)ನ್ಯಾಯಾಧೀಶರಾದ ನಿಂಗೌಡ ಪಾಟೀಲ ವಿಧಿಸಿದ್ದಾರೆ.

ಹಾವೇರಿ ಮಹಿಳಾ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿಗಳಾದ ಎಸ್‌.ಎಚ್‌.ಗರಗ ಮತ್ತು ಟಿ.ಮಂಜಣ್ಣ ಅವರು ತನಿಖೆ ಮಾಡಿ, ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.ಸರ್ಕಾರದ ಪರವಾಗಿ ಅಭಿಯೋಜಕರಾದ ಸಿದ್ಧಾರೂಢ ಎಂ. ಗೆಜ್ಜೆಹಳ್ಳಿ ವಾದ ಮಂಡಿಸಿದ್ದರು.

****

ADVERTISEMENT

ಕೊಲೆ: ಅಪರಾಧಿಗೆ 7 ವರ್ಷ ಶಿಕ್ಷೆ

ಹಾವೇರಿ: ತಾಲ್ಲೂಕಿನ ಹೊಸರಿತ್ತಿ ಗ್ರಾಮದಲ್ಲಿ ಆಸ್ತಿಗೆ ಸಂಬಂಧಿಸಿದಂತೆ 2015ರಲ್ಲಿ ಅಲ್ಲಾಸಾಬ್‌ ಅತ್ತಿಗೇರಿ ಅವರನ್ನು ಕೊಲೆ ಮಾಡಿದ್ದ ಪ್ರಕರಣದಲ್ಲಿ ಅಪರಾಧಿ ಶರೀಫಸಾಬ ಮೌಲಾಸಾಬ್‌ ಅತ್ತಿಗೇರಿಗೆ 7 ವರ್ಷ ಜೈಲು ಶಿಕ್ಷೆ ಹಾಗೂ ₹6 ಸಾವಿರ ದಂಡ ವಿಧಿಸಿ ಹಾವೇರಿಯ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯದ ನ್ಯಾಯಾಧೀಶರಾದ ಯಾದವ ವನಮಾಲಾ ಆನಂದರಾವ್‌ ಅವರು ಆದೇಶ ಹೊರಡಿಸಿದ್ದಾರೆ.

ಗುತ್ತಲ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ತನಿಖಾಧಿಕಾರಿಗಳಾದ ಇನ್‌ಸ್ಪೆಕ್ಟರ್‌ ಲಕ್ಷ್ಮಣ ನಾಯಕ ಅವರು ತನಿಖೆ ನಡೆಸಿ, ದೋಷಾರೋಪಣಾ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.ಸರ್ಕಾರದ ಪರವಾಗಿ ಅಭಿಯೋಜಕರಾದ ಸಿದ್ಧಾರೂಢ ಎಂ. ಗೆಜ್ಜೆಹಳ್ಳಿ ವಾದ ಮಂಡಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.