ADVERTISEMENT

ಹಾವೇರಿ: ಲೈಂಗಿಕ ದೌರ್ಜನ್ಯ; ಅಪರಾಧಿಗೆ 10 ವರ್ಷ ಜೈಲು

​ಪ್ರಜಾವಾಣಿ ವಾರ್ತೆ
Published 26 ಫೆಬ್ರುವರಿ 2021, 15:06 IST
Last Updated 26 ಫೆಬ್ರುವರಿ 2021, 15:06 IST
ಪ್ರಾತಿನಿಧಿಕ ಚಿತ್ರ
ಪ್ರಾತಿನಿಧಿಕ ಚಿತ್ರ   

ಹಾವೇರಿ: ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದ ಹಾನಗಲ್ ತಾಲ್ಲೂಕಿನಯಳ್ಳೂರ ಗ್ರಾಮದ ಸುನೀಲಗೌಡ ಮಹಾದೇವಗೌಡ ಪಾಟೀಲ ಎಂಬಾತನಿಗೆ 10 ವರ್ಷಗಳ ಕಠಿಣ ಕಾರಾಗೃಹ ಸಜೆ ಹಾಗೂ ₹7 ಸಾವಿರ ದಂಡ ವಿಧಿಸಿ ಗುರುವಾರ ಹೆಚ್ಚುವರಿ ಜಿಲ್ಲಾ ಸೆಷನ್ಸ್‌ ಎಫ್.ಟಿ.ಎಸ್.ಸಿ.-1(ಪೊಕ್ಸೊ) ವಿಶೇಷ ನ್ಯಾಯಾಲಯದ ನ್ಯಾಯಾಧೀಶರಾದ ಕೆ.ಎಸ್. ಜ್ಯೋತಿಶ್ರೀ ಆದೇಶ ನೀಡಿದ್ದಾರೆ.

ಆರೋಪಿ ಸುನೀಲಗೌಡ ಬಾಲಕಿಯನ್ನು ಪ್ರೀತಿಸುತ್ತಿರುವುದಾಗಿ ಹೇಳಿ, ಲೈಂಗಿಕ ದೌರ್ಜನ್ಯ ಎಸಗಿರುವ ಕುರಿತು ಹಾನಗಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಲಾಗಿತ್ತು. ಠಾಣೆಯ ಇನ್‌ಸ್ಪೆಕ್ಟರ್‌ ರೇವಪ್ಪ ಕಟ್ಟಿಮನಿ ಅವರು ಪ್ರಕರಣದ ತನಿಖೆ ನಡೆಸಿ ಆರೋಪಿಯ ವಿರುದ್ಧ ದೋಷಾರೋಪಣ ಪಟ್ಟಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದ್ದರು.

ಸಂತ್ರಸ್ತೆಗೆ ₹5 ಲಕ್ಷ ಪರಿಹಾರ ನೀಡಲು ಆದೇಶಿಸಿ ತೀರ್ಪು ನೀಡಿದ್ದಾರೆ ಎಂದು ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ವಾದಮಂಡಿಸಿದ ವಿಶೇಷ ಸರ್ಕಾರಿ ಅಭಿಯೋಜಕ ವಿನಾಯಕ ಎಸ್. ಪಾಟೀಲ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.