
ಶಿಗ್ಗಾವಿ: ‘ಮೊಬೈಲ್ ಬಳಕೆ ದೈಹಿಕ ಮತ್ತು ಮಾನಸಿಕ ಬೆಳವಣಿಗೆಗೆ ಮಾರಕ. ಮೊಬೈಲ್ ಬಳಕೆ ಕುರಿತು ವಿದ್ಯಾರ್ಥಿಗಳಲ್ಲಿ ಸ್ವಯಂ ಜ್ಞಾನ ಜಾಗೃತಿ ಅವಶ್ಯ’ ಎಂದು ಬಂಕಾಪುರ ಪೊಲೀಸ್ ಠಾಣೆ ಪಿಎಸ್‌ಐ ಮಂಜುನಾಥ ಕುರಿ ಹೇಳಿದರು.
ತಾಲ್ಲೂಕಿನ ಬಂಕಾಪುರ ಪಟ್ಟಣದಲ್ಲಿ ಫಕ್ಕೀರೇಶ್ವರ ಕಲ್ಯಾಣ ಮಂಟಪದಲ್ಲಿ ಕರ್ನಾಟಕ ಕೀರ್ತಿ ಪದವಿ ಪೂರ್ವ ಕಾಲೇಜು ಹಾಗೂ ಕೀರ್ತಿ ವಿದ್ಯಾ ಸಂಸ್ಥೆ ವತಿಯಿಂದ ಶುಕ್ರವಾರ ನಡೆದ ವಾರ್ಷಿಕ ಸ್ನೇಹ ಸಮ್ಮೇಳನ, ವಿದ್ಯಾರ್ಥಿಗಳ ಬೀಳ್ಕೊಡುಗೆ ಸಮಾರಂಭದಲ್ಲಿ ಮಾತನಾಡಿದರು.
ಪುರಸಭೆ ಉಪಾಧ್ಯಕ್ಷ ಆಂಜನೇಯ ಗುಡಿಗೇರಿ ಮಾತನಾಡಿ, ‘ಗುರುವಿನ ಸ್ಥಾನ ಪವಿತ್ರವಾಗಿದ್ದು, ವಿದ್ಯಾರ್ಥಿಗಳ ಶ್ರೇಯೋಭಿವೃದ್ಧಿಗೆ ಸದಾ ಶ್ರಮಿಸುತ್ತಾರೆ’ ಎಂದರು.
ರಂಭಾಪುರಿ ಕಾಲೇಜು ಉಪನ್ಯಾಸಕ ಶಿವಪ್ರಕಾಶ ಬಳಿಗಾರ, ಪುರಸಭೆ ಮುಖ್ಯಾಧಿಕಾರಿ ಶಿವಾನಂದ ಅಜ್ಜನವರ ಮಾತನಾಡಿದರು. ಪುರಸಭೆ ಅಧ್ಯಕ್ಷೆ ಮಮತಾ ಮಾಗಿ ಉದ್ಘಾಟಿಸಿದರು. ಕೀರ್ತಿ ವಿದ್ಯಾ ಸಂಸ್ಥೆ ಅಧ್ಯಕ್ಷ ಜಗದೀಶ ಕುರಂದವಾಡ ಅಧ್ಯಕ್ಷತೆ ವಹಿಸಿದ್ದರು. ಪ್ರಾಚಾರ್ಯ ಎಸ್.ಆರ್.ಕಾರಗಿ, ಪ್ರಾಸ್ತಾವಿಕ ಮಾತನಾಡಿದರು.
ಸಂಸ್ಥೆ ಕಾರ್ಯದರ್ಶಿ ಎಸ್.ಮುತ್ತುರಾಜ, ಸಂಸ್ಥೆ ಆಡಳಿತಾಧಿಕಾರಿ ಕೆ.ಎಸ್. ಗಾಣಿಗೇರ, ನಿವೃತ್ತ ಪ್ರಾಚಾರ್ಯ ಎಂ.ಎನ್. ಮಲ್ಲಾಡದ, ಮುಖ್ಯ ಶಿಕ್ಷಕರಾದ ಎಂ.ಬಿ. ಉಂಕಿ, ವೀರಣ್ಣ ಕುಲಕರ್ಣಿ, ಶ್ರೀನಿವಾಸ ನಾಯಕ, ಪಿ.ಎಂ. ಸತ್ಯಪ್ಪನವರ, ಸದಾಶಿವಸ್ವಾಮಿ ಹಿರೇಮಠ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.