ADVERTISEMENT

ಶಿಗ್ಗಾವಿ | ಅಕ್ರಮ ಚಟುವಟಿಕೆಗಳಿಗೆ ಸರ್ಕಾರದ ಆಶೀರ್ವಾದ: ಸಂಸದ ಬೊಮ್ಮಾಯಿ ಆರೋಪ

​ಪ್ರಜಾವಾಣಿ ವಾರ್ತೆ
Published 12 ಅಕ್ಟೋಬರ್ 2025, 6:00 IST
Last Updated 12 ಅಕ್ಟೋಬರ್ 2025, 6:00 IST
ಶಿಗ್ಗಾವಿ ಪಟ್ಟಣದಲ್ಲಿ ಶುಕ್ರವಾರ ನಡೆದ ವಿವಿಧ ಘಟಕಗಳ ಪದಾಧಿಕಾರಿಗಳ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿದರು 
ಶಿಗ್ಗಾವಿ ಪಟ್ಟಣದಲ್ಲಿ ಶುಕ್ರವಾರ ನಡೆದ ವಿವಿಧ ಘಟಕಗಳ ಪದಾಧಿಕಾರಿಗಳ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮದಲ್ಲಿ ಸಂಸದ ಬಸವರಾಜ ಬೊಮ್ಮಾಯಿ ಮಾತನಾಡಿದರು    

ಶಿಗ್ಗಾವಿ: ಕ್ಷೇತ್ರದಲ್ಲಿ ಅಕ್ರಮ ಚಟುವಟಿಕೆಗಳು ನಡೆಯುತ್ತಿದ್ದು, ಕಾನೂನು ವ್ಯವಸ್ಥೆ ಸಂಪೂರ್ಣ ಹದಗಟ್ಟಿದೆ. ಅಕ್ರಮ ಚಟುವಟಿಕೆಗಳಿಗೆ ಸರ್ಕಾರದ ಆರ್ಶೀರ್ವಾದವೇ ಕಾರಣ ಎಂದು ಸಂಸದ ಬಸವರಾಜ ಬೊಮ್ಮಾಯಿ ಸರ್ಕಾರದ ವಿರುದ್ದ ಕಿಡಿಕಾರಿದರು.

ಪಟ್ಟಣದಲ್ಲಿ ಶುಕ್ರವಾರ ನಡೆದ ಶಿಗ್ಗಾವಿ, ಸವಣೂರ ತಾಲ್ಲೂಕಿನ ಬಿಜೆಪಿ ಕಾರ್ಯಕರ್ತರ ಸಭೆ ಹಾಗೂ ವಿವಿಧ ಘಟಕಗಳಿಗೆ ಆಯ್ಕೆಯಾದ ಪದಾಧಿಕಾರಿಗಳಿಗೆ ಪ್ರಮಾಣಪತ್ರ ವಿತರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.

ಕ್ಷೇತ್ರದಲ್ಲಿ ಅತಿವೃಷ್ಟಿಯಿಂದ ಬೆಳೆಗಳಿಗೆ ಅಧಿಕವಾಗಿ ಹಾನಿಯಾಗಿದ್ದು, ಕೇವಲ 16,000 ಹೆಕ್ಟೇರ್ ಪ್ರದೇಶ ಮಾತ್ರ ಹಾನಿಯಾಗಿದೆ ಎಂದು ತೋರಿಸಲಾಗಿದೆ. ಹಾನಿಯಾದ ರೈತರಿಗೆ ಅನ್ಯಾಯವಾಗುತ್ತಿದ್ದು, ತಕ್ಷಣ ಮರು ಸಮೀಕ್ಷೆ ನಡೆಸಿ ಪರಿಹಾರ ನೀಡುವ ವ್ಯವಸ್ಥೆ ಮಾಡಬೇಕು’ ಎಂದು ಆಗ್ರಹಿಸಿದರು.

ADVERTISEMENT

ಮುಂಬರುವ ತಾಲ್ಲೂಕು ಪಂಚಾಯಿತಿ ಹಾಗೂ ಜಿಲ್ಲಾ ಪಂಚಾಯಿತಿ ಚುನಾವಣೆಗಳಲ್ಲಿ ಪಕ್ಷದ ಕಾರ್ಯಕರ್ತರು ಶ್ರಮವಹಿಸಬೇಕು. ವಿವಿಧ ಘಟಕದ ಪದಾಧಿಕಾರಿಗಳು ತಮಗೆ ನೀಡಿದ ಜವಾಬ್ದಾರಿ ನಿರ್ವಹಿಸಬೇಕು’ ಎಂದರು.

ಬಿಜೆಪಿ ಮುಖಂಡ ಭರತ ಬೊಮ್ಮಾಯಿ, ತಾಲ್ಲೂಕು ಬಿಜೆಪಿ ಅಧ್ಯಕ್ಷ ವಿಶ್ವನಾಥ ಹರವಿ, ಸವಣೂರ ತಾಲ್ಲೂಕು ಅಧ್ಯಕ್ಷ ಶಿವಪುತ್ರಪ್ಪ ಕಲಕೋಟಿ, ಮುಖಂಡರಾದ ಶಿವಾನಂದ ಮ್ಯಾಗೇರಿ, ಮಲ್ಲೇಶಪ್ಪ ಹರಿಜನ, ಶಿವಾನಂದ ಸೊಬರದ, ರವಿ ಕುಡವಕ್ಕಲಿಗೇರ, ನರಹರಿ ಕಟ್ಟಿ, ಹೊನ್ನಪ್ಪ ಹೂಗಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.