ಸಾವು
(ಪ್ರಾತಿನಿಧಿಕ ಚಿತ್ರ)
ಹಾವೇರಿ: ಜಿಲ್ಲೆಯ ಶಿಗ್ಗಾವಿ ಪಟ್ಟಣದಲ್ಲಿ ಮಂಗಳವಾರ ನಡೆದಿದ್ದ ಗುತ್ತಿಗೆದಾರ ಶಿವಾನಂದ ಚನ್ನಬಸಪ್ಪ ಕುನ್ನೂರ ಕೊಲೆ ಪ್ರಕರಣದ ಪ್ರಮುಖ ಆರೋಪಿಯ ಮನೆಗೆ ಬೆಂಕಿ ಹೊತ್ತಿಕೊಂಡಿದೆ.
ಕೊಲೆ ಬಳಿಕ ಆರೋಪಿಗಳು ಹೊರ ರಾಜ್ಯಕ್ಕೆ ತೆರಳಿ ತಲೆಮರೆಸಿಕೊಂಡಿದ್ದು, ಅವರ ಪತ್ತೆಗಾಗಿ ನಾಲ್ಕು ವಿಶೇಷ ತಂಡ ರಚಿಸಲಾಗಿದೆ. ಇದರ ನಡುವೆಯೇ ಪ್ರಮುಖ ಆರೋಪಿ ನಾಗರಾಜ ಸವದತ್ತಿ ಅವರ ಮನೆಗೆ ಮಂಗಳವಾರ ತಡರಾತ್ರಿ ಬೆಂಕಿ ಹೊತ್ತಿಕೊಂಡಿದೆ.
ಯಾರೋ ವಿರೋಧಿ ಬಣದ ವ್ಯಕ್ತಿಗಳೇ ಬೆಂಕಿ ಹಚ್ಚಿರುವ ಶಂಕೆ ವ್ಯಕ್ತವಾಗಿದೆ. ಮನೆಗೆ ಭೇಟಿ ನೀಡಿದ್ದ ಪೊಲೀಸರು ಮಾಹಿತಿ ಪಡೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.