ADVERTISEMENT

ಶಿಗ್ಗಾವಿ: ನೀರಾವರಿಗಾಗಿ ವರದಾ-ಬೇಡ್ತಿ ನದಿಗಳ ಜೋಡಣೆ ಅವಶ್ಯ- ಶಾಸಕ ಪಠಾಣ ಅಭಿಮತ

ಶಾಸಕ ಯಾಸೀರ ಅಹ್ಮದಖಾನ್ ಪಠಾಣ ಅಭಿಮತ

​ಪ್ರಜಾವಾಣಿ ವಾರ್ತೆ
Published 16 ಆಗಸ್ಟ್ 2025, 2:36 IST
Last Updated 16 ಆಗಸ್ಟ್ 2025, 2:36 IST
ಶಿಗ್ಗಾವಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಯಿತು
ಶಿಗ್ಗಾವಿ ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದಲ್ಲಿ ನಿವೃತ್ತ ಸೈನಿಕರನ್ನು ಸನ್ಮಾನಿಸಲಾಯಿತು   

ಶಿಗ್ಗಾವಿ: ಶಾಶ್ವತ ನೀರಾವರಿ ಯೋಜನೆ ಹಾಗೂ ರೈತರ ಆರ್ಥಿಕ ಮಟ್ಟ ಹೆಚ್ಚಿಸುವ ಉದ್ದೇಶದಿಂದ ವರದಾ-ಬೇಡ್ತಿ ನದಿಗಳ ಜೋಡಣೆ ಅವಶ್ಯಕವಾಗಿದೆ. ಅದರಿಂದ ಈ ಭಾಗದ ರೈತರ ಬವಣೆ ತಡೆಯಲು ಸಾಧ್ಯ ಎಂದು ಶಾಸಕ ಯಾಸೀರ ಅಹ್ಮದಖಾನ್ ಪಠಾಣ ಹೇಳಿದರು.

ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಶುಕ್ರವಾರ ತಾಲ್ಲೂಕು ಆಡಳಿತದ ವತಿಯಿಂದ ನಡೆದ ಸ್ವಾತಂತ್ರ್ಯ ದಿನಾಚರಣೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

‘ಕ್ರೀಡಾಂಗಣದ ಅಭಿವೃದ್ಧಿಗಾಗಿ ಸರ್ಕಾರ ಈಗಾಗಲೆ ಒಂದು ಕೋಟಿ ರೂಪಾಯಿ ಅನುದಾನ ನೀಡಿದ್ದು, ಪುರಸಭೆ ಸದಸ್ಯರೊಂದಿಗೆ ಚರ್ಚಿಸಿ ಕಾಮಗಾರಿ ಆರಂಭಿಸಲಾಗುವುದು’ ಎಂದು ಹೇಳಿದರು.

ADVERTISEMENT

ತಹಶೀಲ್ದಾರ್ ಯಲ್ಲಪ್ಪ ಗೋಣಣ್ಣವರ ಧ್ವಜಾರೋಹಣ ನೆರವೇರಿಸಿದರು. ದೇಶ ಸರ್ವಾಂಗೀಣ ಅಭಿವೃದ್ಧಿಯಾಗಿದ್ದು, ವಿಶ್ವಗುರು ಸ್ಥಾನ ಪಡೆದಿದೆ ಎಂದರು.

ಸೈನಿಕರನ್ನು, ಪ್ರತಿಭಾವಂತ ವಿದ್ಯಾರ್ಥಿಗಳನ್ನು ಹಾಗೂ ವಿವಿಧ ರಂಗದಲ್ಲಿನ ಸಾಧಕರನ್ನು ಸನ್ಮಾನಿಸಲಾಯಿತು. ಗಂಗೆಭಾವಿ 10ನೇ ಕೆ.ಎಸ್.ಆರ್.ಪಿ 10ನೇ ಪಡೆ ಪೊಲೀಸರು, ವಿವಿಧ ಶಾಲೆ ಕಾಲೇಜಿನ ವಿದ್ಯಾರ್ಥಿಳಿಂದ ಆಪರ್ಷಕ ಪಥ ಸಂಚಲನ ಜರುಗಿತು. ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಜನಮನ ರಂಜಿಸಿದವು.

ಪುರಸಭೆ ಅಧ್ಯಕ್ಷ ಸಿದ್ದಾರ್ಥಗೌಡ ಪಾಟೀಲ ಮಾತನಾಡಿದರು. ತಾಲ್ಲೂಕು ಪಂಚಾಯಿತಿ ಇಒ ಮಂಜುನಾಥ ಸಾಳೊಂಕಿ, ಬಿಇಒ ಎಂ.ಬಿ. ಅಂಬಿಗೇರ ಪ್ರಗತಿಪರ ರೈತ ಫಕ್ಕಿರಪ್ಪ ಕುಂದೂರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.