ADVERTISEMENT

ಶಿಗ್ಗಾವಿ:‌ ವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಹಣ ದುರುಪಯೋಗ- ತನಿಖೆಗೆ ಮನವಿ

​ಪ್ರಜಾವಾಣಿ ವಾರ್ತೆ
Published 9 ಸೆಪ್ಟೆಂಬರ್ 2025, 2:46 IST
Last Updated 9 ಸೆಪ್ಟೆಂಬರ್ 2025, 2:46 IST
ಶಿಗ್ಗಾವಿ ತಾಲ್ಲೂಕಿನ ವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಹಣ ದುರುಪಯೋಗವಾಗಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಸೋಮವಾರ ಸಾರ್ವಜನಿಕರು ತಾಪಂ ಇಓ ಮಂಜುನಾಥ ಸಾಳೊಂಕಿ ಅವರಿಗೆ ಮನವಿ ಸಲ್ಲಿಸಿದರು.
ಶಿಗ್ಗಾವಿ ತಾಲ್ಲೂಕಿನ ವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಹಣ ದುರುಪಯೋಗವಾಗಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ಮೇಲೆ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಸೋಮವಾರ ಸಾರ್ವಜನಿಕರು ತಾಪಂ ಇಓ ಮಂಜುನಾಥ ಸಾಳೊಂಕಿ ಅವರಿಗೆ ಮನವಿ ಸಲ್ಲಿಸಿದರು.   

ಶಿಗ್ಗಾವಿ: ತಾಲ್ಲೂಕಿನ ವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ ಹಣ ದುರುಪಯೋಗವಾಗಿದ್ದು, ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಾನೂನು ಕ್ರಮ ಜರುಗಿಸುವಂತೆ ಆಗ್ರಹಿಸಿ ಸೋಮವಾರ ಸಾರ್ವಜನಿಕರು ತಾಲ್ಲೂಕು ಪಂಚಾಯಿತಿ ಇಒ ಮಂಜುನಾಥ ಸಾಳೊಂಕಿ ಅವರಿಗೆ ಮನವಿ ಸಲ್ಲಿಸಿದರು.

ವನಹಳ್ಳಿ ಗ್ರಾಮ ಪಂಚಾಯಿತಿಯಲ್ಲಿ 2023-24 ಮತ್ತು 2024-25ನೇ ಸಾಲಿನ 15ನೇ ಹಣಕಾಸಿನ ವಿವಿಧ ಕಾಮಗಾರಿಗಳಲ್ಲಿ ಹಣ ದುರುಪಯೋಗ ಮಾಡಿಕೊಂಡಿರುವುದು ಕಂಡು ಬಂದಿದ್ದು, ಸಂಪೂರ್ಣ ತನಿಖೆ ಮಾಡಿ, ತಪ್ಪಿತಸ್ಥರ ವಿರುದ್ದ ಕಾನೂನು ಕ್ರಮ ಜರುಗಿಸುವಂತೆ ಒತ್ತಾಯಿಸಿದರು.

ಈಗಾಗಲೇ ಕಳೆದ ಮೇ 3 ರಂದು ಸಮಗ್ರ ತನಿಖೆಗೆ ಅಗ್ರಹಿಸಿ ಮನವಿ ಕೊಟ್ಟಿದ್ದೆವು. ಆದರೆ ಯಾವುದೇ ತರಹದ ತನಿಖೆ ಮಾಡಿಲ್ಲ. ಸರ್ಕಾರದಿಂದ ಬಂದಂತಹ ಹಣವನ್ನು ಪಂಚಾಯತಿ ಅಭಿವೃದ್ಧಿ ಕೆಲಸಗಳಲ್ಲಿ ಉಪಯೋಗ ಮಾಡದೆ ದುರುಪಯೋಗ ಮಾಡುತ್ತಿರುವವರ ಮೇಲೆ ಕಾನೂನಾತ್ಮಕ ಕ್ರಮವನ್ನು ಜರುಗಿಸಿ, ಸೂಕ್ತ ತನಿಖೆ ಮಾಡ ಎಂದು ಮನವಿ ಮೂಲಕ ಒತ್ತಾಯಿಸಿದ್ದಾರೆ.

ADVERTISEMENT

ನಮ್ಮ ಮನವಿಗೆ ಸ್ಪಂದಿಸಿ 8 ದಿನಗಳ ಒಳಗಾಗಿ ತನಿಖೆ ಮಾಡಿ ವರದಿಯನ್ನು ಸಲ್ಲಿಸದೇ ಹೋದಲ್ಲಿ ನಾವು ಲೋಕಾಯುಕ್ತ ತನಿಖೆಗೆ ಮೊರೆ ಹೋಗಲಾಗುತ್ತದೆ ಎಂದು ಮನವಿಯಲ್ಲಿ ತಿಳಿಸಿದ್ದಾರೆ.

ಸಮಾಜ ಸೇವಾ ಕಾರ್ಯಕರ್ತ ಮಂಜುನಾಥ ಶಿರಹಟ್ಟಿ, ಮುಖಂಡರಾದ ಅಶೋಕ ವಡ್ಡರ, ಯಲ್ಲಪ್ಪ ವಡ್ಡರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.