ಹಾವೇರಿ: ಜಿಲ್ಲಾಡಳಿತ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಕೋವಿಡ್ ಹಿನ್ನೆಲೆಯಲ್ಲಿ ಶ್ರೀಕೃಷ್ಣ ಜಯಂತಿ ಕಾರ್ಯಕ್ರಮವನ್ನು ಸರಳವಾಗಿ ಆಚರಿಸಲಾಯಿತು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಮಂಗಳವಾರ ಬೆಳಿಗ್ಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣನವರ ಅವರು ಶ್ರೀಕೃಷ್ಣನ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವುದರ ಮೂಲಕ ಭಕ್ತಿಪೂರ್ವಕ ನಮನ ಸಲ್ಲಿಸಿದರು.
ತಾ.ಪಂ ಅಧ್ಯಕ್ಷೆ ಕಮಲವ್ವ ಪಾಟೀಲ, ಹೆಚ್ಚುವರಿ ಜಿಲ್ಲಾಧಿಕಾರಿ ಎಸ್.ಯೋಗೇಶ್ವರ, ಸಮಾಜ ಕಲ್ಯಾಣ ಇಲಾಖೆ ಉಪ ನಿರ್ದೇಶಕಿ ಚೈತ್ರಾ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಮಖಾನೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕಿ ಶಶಿಕಲಾ ಹುಡೇದ, ಸಿ.ಎಮ್. ತಂಗೋಡರ, ಪಿ.ಆರ್ ಗೌಡರ, ಬಿ.ಡಿ. ಸಿದ್ದಪ್ಪಳವರ, ಕೆ.ಎಸ್. ಸಿದ್ದಬಸಪ್ಪ ಯಾಧವ, ಹನುಮಂತಗೌಡ ಗೊಲ್ಲರ, ರಾಮಪ್ಪ ಗೊಲ್ಲರ, ಸುಭಾಸ ಕನ್ನಮನವರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.