ಸವಣೂರು: ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳ ಪ್ರಯೋಜನ ಪಡೆದುಕೊಂಡು ಕುಟುಂಬವನ್ನು ಸುರಕ್ಷಿತವಾಗಿರಿಸಲು ಜನತೆ ಮುಂದಾಗಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ನೀಲಪ್ಪ ಹಾದಿಮನಿ ತಿಳಿಸಿದರು.
ಪಟ್ಟಣದ ಎಸ್.ಎಂ. ಕೃಷ್ಣ ನಗರದಲ್ಲಿ ಪುರಸಭೆ, ಭಾರತೀಯ ಸ್ಟೇಟ್ ಬ್ಯಾಂಕ್, ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರ, ಮದರ ಸ್ವಯಂ ಸೇವಾ ಗ್ರಾಮೀಣ ಅಭಿವೃದ್ದಿ ಸಂಸ್ಥೆ, ಸಿಎಫ್‌ಎಲ್ ಅವರ ಸಹಯೋಗದಲ್ಲಿ ಮಂಗಳವಾರ ಏರ್ಪಡಿಸಿದ್ದ ಜನಸುರಕ್ಷಾ ಅಭಿಯಾನ ಹಾಗೂ ಡಿಜಿಟಲ್ ಬ್ಯಾಂಕಿಂಗ್ ಜಾಗೃತಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ಕೇಂದ್ರ ಸರ್ಕಾರದ ಸಾಮಾಜಿಕ ಭದ್ರತಾ ಯೋಜನೆಗಳು ಬಡವರಿಗೆ ಕೈಗೆಟಕುಗುವ ದರದಲ್ಲಿ ಸಿಗುವ ವಿಮಾ ಯೋಜನೆಗಳಾಗಿವೆ. ಪ್ರತಿಯೊಬ್ಬರೂ ಯೋಜನೆಯ ಸದುಪಯೋಗ ಪಡೆದುಕೊಳ್ಳಬೇಕು ಎಂದರು.
ಅಮೂಲ್ಯ ಆರ್ಥಿಕ ಸಾಕ್ಷರತಾ ಕೇಂದ್ರ ಸಮಾಲೋಚಕ ಹರೀಶ ಹಿರಳ್ಳಿ ಪ್ರಾಸ್ತಾವಿಕವಾಗಿ ಮಾತನಾಡಿ, ಡಿಜಿಟಲ್ ಬ್ಯಾಂಕಿಂಗ್ ನಗದು ರಹಿತ ವ್ಯವಹಾರ ಹಾಗೂ ಬ್ಯಾಂಕಿನ ಸರ್ಕಾರಿ ಯೋಜನೆಗಳಾದ ಪ್ರಧಾನಮಂತ್ರಿ ಜನಧನ್, ಜೀವನ್ ಜ್ಯೋತಿ, ಸುರಕ್ಷಾ ವಿಮಾ ಅಟಲ್ ಪಿಂಚಣಿ, ಆರ್‌ಕೆವೈಸಿ ಹಾಗೂ ಅಕೌಂಟ್ ನಾಮಿನೇಷನ್ ಕುರಿತು ವಿವರಿಸಿದರು.
ಭಾರತೀಯ ಸ್ಟೇಟ್ ಬ್ಯಾಂಕ್ ಸವಣೂರ ಶಾಖಾ ವ್ಯವಸ್ಥಾಪಕಿ ರೂಪಾ ಎಚ್.ಬಿ., ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಪುರಸಭೆ ವ್ಯವಸ್ಥಾಪಕ ಮಹೇಶ ದೊಡ್ಡಣ್ಣವರ, ಕಂದಾಯ ಅಧಿಕಾರಿ ಮಹೇಶ ಹಡಪದ, ಗುರುನಾಥ ಬೋಗಾರ, ಬ್ಯಾಂಕ್ ಮಿತ್ರರು, ಅಂಗನವಾಡಿ ಕಾರ್ಯಕರ್ತೆಯರು, ಮಹಿಳಾ ಸಂಘಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದರು. ಸಿಎಫ್‍ಎಲ್ ಕೊಟ್ರೇಶ ಕಡ್ಲಿಮಠ ಹಾಗೂ ಮಂಜುಳಾ ಭೋವಿ ಕಾರ್ಯಕ್ರಮ ನಿರ್ವಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.