ADVERTISEMENT

ಎಸ್ಸೆಸ್ಸೆಲ್ಸಿ: 161 ವಿದ್ಯಾರ್ಥಿಗಳು ಗೈರು

​ಪ್ರಜಾವಾಣಿ ವಾರ್ತೆ
Published 1 ಜುಲೈ 2020, 16:18 IST
Last Updated 1 ಜುಲೈ 2020, 16:18 IST
ಹಾವೇರಿ ನಗರದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಬುಧವಾರ ಬಂದ ವಿದ್ಯಾರ್ಥಿಯನ್ನು ಆರೋಗ್ಯ ತಪಾಸಣೆ ಮಾಡಲಾಯಿತು  –ಪ್ರಜಾವಾಣಿ ಚಿತ್ರ 
ಹಾವೇರಿ ನಗರದ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರಕ್ಕೆ ಬುಧವಾರ ಬಂದ ವಿದ್ಯಾರ್ಥಿಯನ್ನು ಆರೋಗ್ಯ ತಪಾಸಣೆ ಮಾಡಲಾಯಿತು  –ಪ್ರಜಾವಾಣಿ ಚಿತ್ರ    

ಹಾವೇರಿ: ಜಿಲ್ಲೆಯಲ್ಲಿ ಬುಧವಾರ ನಡೆದ ಎಸ್.ಎಸ್.ಎಲ್.ಸಿ. ಸಮಾಜ ವಿಜ್ಞಾನ ವಿಷಯದ ಪರೀಕ್ಷೆಗೆ 20,269 ವಿದ್ಯಾರ್ಥಿಗಳು ಹಾಜರಾಗಿದ್ದರು.

ಜಿಲ್ಲೆಯಲ್ಲಿ 20,430 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, 161 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.ಕಂಟೈನ್ಮೆಂಟ್ ವಲಯದಿಂದ ಬಂದಿದ್ದ 224 ವಿದ್ಯಾರ್ಥಿಗಳು ಪರೀಕ್ಷೆ ಬರೆಯಲು ವಿಶೇಷ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು. 21 ವಿದ್ಯಾರ್ಥಿಗಳು ಅನಾರೋಗ್ಯದ ನಿಮಿತ್ತ ವಿಶೇಷ ಕೊಠಡಿಯಲ್ಲಿ ಕುಳಿತು ಪರೀಕ್ಷೆ ಬರೆದರು.

19,725 ವಿದ್ಯಾರ್ಥಿಗಳು ಮೊದಲ ಬಾರಿಗೆ ಪರೀಕ್ಷೆಗೆ ಹಾಜರಾಗಿದ್ದರು. 459 ಖಾಸಗಿ ಹೊಸ ಅಭ್ಯರ್ಥಿಗಳ ಪೈಕಿ 388 ವಿದ್ಯಾರ್ಥಿಗಳು ಹಾಜರಾಗಿ, 71 ಮಕ್ಕಳು ಗೈರಾಗಿದ್ದರು. 77 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳಲ್ಲಿ 62 ಮಕ್ಕಳು ಹಾಜರಾಗಿ, 15 ಮಕ್ಕಳು ಗೈರು ಹಾಜರಾಗಿದ್ದರು. ವಲಸೆ ಬಂದ 695 ವಿದ್ಯಾರ್ಥಿಗಳ ಪೈಕಿ, 692 ಮಕ್ಕಳು ಪರೀಕ್ಷೆ ಬರೆದರೆ, 3 ಮಕ್ಕಳು ಗೈರು ಹಾಜರಾಗಿದ್ದರು.ಯಾವುದೇ ವಿದ್ಯಾರ್ಥಿಗಳು ಡಿಬಾರ್ ಆಗಿರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.