ADVERTISEMENT

ಹಾವೇರಿ | ಎಸ್ಸೆಸ್ಸೆಲ್ಸಿ: 165 ವಿದ್ಯಾರ್ಥಿಗಳು ಗೈರು

​ಪ್ರಜಾವಾಣಿ ವಾರ್ತೆ
Published 2 ಜುಲೈ 2020, 15:01 IST
Last Updated 2 ಜುಲೈ 2020, 15:01 IST
ಹಾವೇರಿ ನಗರದಲ್ಲಿ ಗುರುವಾರ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಿಂದ ಹೊರಬಂದ ವಿದ್ಯಾರ್ಥಿಗಳ ದೃಶ್ಯ 
ಹಾವೇರಿ ನಗರದಲ್ಲಿ ಗುರುವಾರ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಿಂದ ಹೊರಬಂದ ವಿದ್ಯಾರ್ಥಿಗಳ ದೃಶ್ಯ    

ಹಾವೇರಿ: ಜಿಲ್ಲೆಯಲ್ಲಿ ಗುರುವಾರ ನಡೆದ ಎಸ್ಸೆಸ್ಸೆಲ್ಸಿ ಪ್ರಥಮ ಭಾಷೆ ವಿಷಯದ ಪರೀಕ್ಷೆಗೆ 165 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಜಿಲ್ಲೆಯಲ್ಲಿ 20,369 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದು, ಈ ಪೈಕಿ 20,204 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. ಕಂಟೈನ್ಮೆಂಟ್ ವಲಯದಿಂದ ಬಂದಿದ್ದ 248 ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಅನಾರೋಗ್ಯ ಕಾರಣದಿಂದ 22 ವಿದ್ಯಾರ್ಥಿಗಳಿಗೂ ವಿಶೇಷ ಕೊಠಡಿ ವ್ಯವಸ್ಥೆ ಮಾಡಲಾಗಿತ್ತು.

459 ಖಾಸಗಿ ಹೊಸ ಅಭ್ಯರ್ಥಿಗಳ ಪೈಕಿ, 388 ಪರೀಕ್ಷೆ ಹಾಜರಾಗಿದ್ದರು. 71 ಮಕ್ಕಳು ಗೈರಾಗಿದ್ದರು. 67 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳ ಪೈಕಿ, 53 ಮಕ್ಕಳು ಹಾಜರಿದ್ದು, 14 ಮಕ್ಕಳು ಗೈರು ಹಾಜರಾಗಿದ್ದರು. 696 ವಲಸೆ ವಿದ್ಯಾರ್ಥಿಗಳಲ್ಲಿ 684 ಮಕ್ಕಳು ಹಾಜರಾಗಿದ್ದು, 5 ಮಕ್ಕಳು ಗೈರು ಹಾಜರಾಗಿದ್ದರು.ಯಾವುದೇ ವಿದ್ಯಾರ್ಥಿಗಳು ಡಿಬಾರ್ ಆಗಿರುವುದಿಲ್ಲ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಗೇರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.