ADVERTISEMENT

167 ಮಕ್ಕಳು ಗೈರು, ಒಬ್ಬ ಡಿಬಾರ್‌

ಎಸ್ಸೆಸ್ಸೆಲ್ಸಿ ಪರೀಕ್ಷೆ: ಜಿಲ್ಲೆಯಲ್ಲಿ 3ನೇ ದಿನವೂ ಸುಗಮ

​ಪ್ರಜಾವಾಣಿ ವಾರ್ತೆ
Published 29 ಜೂನ್ 2020, 14:07 IST
Last Updated 29 ಜೂನ್ 2020, 14:07 IST
ಹಾವೇರಿ ನಗರದ ಮುನ್ಸಿಪಲ್‌ ಹೈಸ್ಕೂಲ್‌ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಿಂದ ಸೋಮವಾರ ಅಂತರ ಕಾಯ್ದುಕೊಂಡು ಹೊರಬಂದ ವಿದ್ಯಾರ್ಥಿಗಳು 
ಹಾವೇರಿ ನಗರದ ಮುನ್ಸಿಪಲ್‌ ಹೈಸ್ಕೂಲ್‌ ಎಸ್ಸೆಸ್ಸೆಲ್ಸಿ ಪರೀಕ್ಷಾ ಕೇಂದ್ರದಿಂದ ಸೋಮವಾರ ಅಂತರ ಕಾಯ್ದುಕೊಂಡು ಹೊರಬಂದ ವಿದ್ಯಾರ್ಥಿಗಳು    

ಹಾವೇರಿ: ಜಿಲ್ಲೆಯಲ್ಲಿ ಸೋಮವಾರ ನಡೆದ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ವಿಜ್ಞಾನ/ ರಾಜ್ಯಶಾಸ್ತ್ರ ವಿಷಯದ 20,586 ವಿದ್ಯಾರ್ಥಿಗಳು ಪರೀಕ್ಷೆ ಬರೆದರು. 3ನೇ ದಿನವೂ ಪರೀಕ್ಷೆ ಯಾವುದೇ ಗೊಂದಲ, ಆತಂಕವಿಲ್ಲದೆ ಸರಾಗವಾಗಿ ನಡೆಯಿತು.

ನಗರದ ಸೇಂಟ್ ಆನ್ಸ್ ಸ್ಕೂಲ್‍ನ ಪರೀಕ್ಷಾ ಕೇಂದ್ರದಲ್ಲಿ ಒಬ್ಬ ಖಾಸಗಿ ಅಭ್ಯರ್ಥಿ ಡಿಬಾರ್ ಆಗಿದ್ದಾರೆ ಎಂದು ಸಾರ್ವಜನಿಕ ಶಿಕ್ಷಣ ಇಲಾಖೆ ಉಪನಿರ್ದೇಶಕ ಅಂದಾನಪ್ಪ ವಡಗೇರಿ ತಿಳಿಸಿದ್ದಾರೆ.

ಪರೀಕ್ಷೆಗೆ ನೋಂದಾಯಿಸಿಕೊಂಡ 20,753 ವಿದ್ಯಾರ್ಥಿಗಳ ಪೈಕಿ 20,586 ವಿದ್ಯಾರ್ಥಿಗಳು ಹಾಜರಾಗಿದ್ದಾರೆ. 167 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.ಕಂಟೈನ್ಮೆಂಟ್ ವಲಯದಿಂದ ಬಂದ 131 ವಿದ್ಯಾರ್ಥಿಗಳಿಗೆ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆಯಲು ಅವಕಾಶ ಮಾಡಿಕೊಡಲಾಗಿತ್ತು. ಐವರು ವಿದ್ಯಾರ್ಥಿಗಳು ಅನಾರೋಗ್ಯದ ಕಾರಣ ವಿಶೇಷ ಕೊಠಡಿಯಲ್ಲಿ ಪರೀಕ್ಷೆ ಬರೆದರು.

ADVERTISEMENT

393 ಖಾಸಗಿ ಹೊಸ ಅಭ್ಯರ್ಥಿಗಳು ಹಾಗೂ 110 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು. ಕ್ರಮವಾಗಿ 65 ಮತ್ತು 23 ವಿದ್ಯಾರ್ಥಿಗಳು ಗೈರಾಗಿದ್ದರು. ವಲಸೆ ವಿದ್ಯಾರ್ಥಿಗಳಲ್ಲಿ 692 ಮಂದಿ ಹಾಜರಾಗಿ, 3 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.