ADVERTISEMENT

ಎಸ್ಸೆಸ್ಸೆಲ್ಸಿ ಪರೀಕ್ಷೆ: 1097 ವಿದ್ಯಾರ್ಥಿಗಳು ಗೈರು

​ಪ್ರಜಾವಾಣಿ ವಾರ್ತೆ
Published 25 ಜೂನ್ 2020, 10:18 IST
Last Updated 25 ಜೂನ್ 2020, 10:18 IST
ಸಾಂದರ್ಭಿಕ ಚಿತ್ರ
ಸಾಂದರ್ಭಿಕ ಚಿತ್ರ   

ಹಾವೇರಿ: ಜಿಲ್ಲೆಯಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆಯ ಮೊದಲ ದಿನವಾದ ಗುರುವಾರ ದ್ವಿತೀಯ ಭಾಷೆ ಇಂಗ್ಲಿಷ್‌/ಕನ್ನಡ ಪತ್ರಿಕೆಗೆ ಒಟ್ಟು 1097 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ಮೊದಲ ದಿನದ ಪರೀಕ್ಷೆಗೆ 19,600 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಆದರೆ, 18,503 ವಿದ್ಯಾರ್ಥಿಗಳು ಮಾತ್ರ ಪರೀಕ್ಷೆಗೆ ಹಾಜರಾದರು.
ಬ್ಯಾಡಗಿ ತಾಲ್ಲೂಕು–114, ಹಾನಗಲ್ ತಾಲ್ಲೂಕು‌–135, ಹಾವೇರಿ ತಾಲ್ಲೂಕು–285, ಹಿರೇಕೆರೂರು ತಾಲ್ಲೂಕು– 173, ರಾಣೆಬೆನ್ನೂರು ತಾಲ್ಲೂಕು–184, ಸವಣೂರು ತಾಲ್ಲೂಕು–65 ಹಾಗೂ ಶಿಗ್ಗಾವಿ ತಾಲ್ಲೂಕಿನಲ್ಲಿ 141 ವಿದ್ಯಾರ್ಥಿಗಳು ಗೈರು ಹಾಜರಾಗಿದ್ದರು.

ವಿದ್ಯಾರ್ಥಿಗಳಿಗೆ ಶಿಕ್ಷಕರ ತಂಡ ಸ್ಯಾನಿಟೈಸರ್‌ ಹಾಕಿ, ಮಾಸ್ಕ್‌ ವಿತರಿಸಿ, ಪರೀಕ್ಷಾ ಕೇಂದ್ರಕ್ಕೆ ಪ್ರವೇಶ ನೀಡಿದರು. ಅಂತರ ಕಾಯ್ದುಕೊಂಡ ವಿದ್ಯಾರ್ಥಿಗಳು ನಿರಾತಂಕವಾಗಿ ಪರೀಕ್ಷೆ ಬರೆದರು ಎಂದು ಡಿಡಿಪಿಐ ಅಂದಾನಪ್ಪ ವಡಗೇರಿ ‘ಪ್ರಜಾವಾಣಿ’ಗೆ ತಿಳಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.