ADVERTISEMENT

ಇಂದಿರಾ ಕ್ಯಾಂಟೀನ್‌ ಶೀಘ್ರ ಆರಂಭಿಸಿ: ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ

ಎಲ್ಲ ಪೌರಕಾರ್ಮಿಕರಿಗೆ ಉಪಾಹಾರ ಪೂರೈಸಿ

​ಪ್ರಜಾವಾಣಿ ವಾರ್ತೆ
Published 25 ಜೂನ್ 2022, 6:51 IST
Last Updated 25 ಜೂನ್ 2022, 6:51 IST
ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅನುಸೂಚಿತ ಜಾತಿ ಹಾಗೂ ಬುಡಕಟ್ಟು ಉಪಯೋಜನೆಗಳ ಅಭಿವೃದ್ಧಿ ಕಾರ್ಯಗಳ ಅನುಷ್ಠಾನ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮಾತನಾಡಿದರು. ಎಸ್ಪಿ ಹನುಮಂತರಾಯ ಇದ್ದಾರೆ  
ಹಾವೇರಿ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅನುಸೂಚಿತ ಜಾತಿ ಹಾಗೂ ಬುಡಕಟ್ಟು ಉಪಯೋಜನೆಗಳ ಅಭಿವೃದ್ಧಿ ಕಾರ್ಯಗಳ ಅನುಷ್ಠಾನ ಪರಿಶೀಲನಾ ಸಭೆಯಲ್ಲಿ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಮಾತನಾಡಿದರು. ಎಸ್ಪಿ ಹನುಮಂತರಾಯ ಇದ್ದಾರೆ     

ಹಾವೇರಿ:ಜಿಲ್ಲೆಯಲ್ಲಿರುವ ಎಲ್ಲ ಇಂದಿರಾ ಕ್ಯಾಂಟಿನ್ ಆರಂಭಕ್ಕೆ ಈಗಾಗಲೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಳಿಸಲಾಗಿದೆ. ಕಾರ್ಯಾದೇಶ ನೀಡಿ ತ್ವರಿತವಾಗಿ ಕಾರ್ಯಾರಂಭಗೊಳಿಸಲು ನಗರ ಸ್ಥಳೀಯ ಸಂಸ್ಥೆಗಳ ಮುಖ್ಯಸ್ಥರಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ಸೂಚನೆ ನೀಡಿದರು.

ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಅನುಸೂಚಿತ ಜಾತಿ ಹಾಗೂ ಬುಡಕಟ್ಟು ಉಪಯೋಜನೆಗಳ ಅಭಿವೃದ್ಧಿ ಕಾರ್ಯಗಳ ಅನುಷ್ಠಾನ ಪರಿಶೀಲನೆ, ಸಫಾಯಿ ಕರ್ಮಚಾರಿಗಳ ಜಿಲ್ಲಾ ಮಟ್ಟದ ಸಮಿತಿ ಸಭೆ ಹಾಗೂ ಪರಿಶಿಷ್ಟ ಜಾತಿ, ಪರಿಶಿಷ್ಟ ವರ್ಗಗಳ ಜನರ ಮೇಲಿನ ದೌರ್ಜನ್ಯ ನಿಯಂತ್ರಣ ಹಾಗೂ ಜಿಲಾ ಜಾಗೃತಿ ಸಮಿತಿ ಸಭೆಯ ಅಧ್ಯಕ್ಷತೆವಹಿಸಿ ಅವರು ಪರಿಶೀಲನೆ ನಡೆಸಿದರು.

ಎಲ್ಲ ಪೌರಕಾರ್ಮಿಕರಿಗೆ ಇಂದಿರಾ ಕ್ಯಾಂಟೀನ್‌ನಿಂದ ಉಪಾಹಾರ ಪೂರೈಸಬೇಕು. ಸಫಾಯಿ ಕರ್ಮಚಾರಿಗಳಿಗೆ ಗೃಹ ಭಾಗ್ಯ ಯೋಜನೆಯಡಿ ವಸತಿ ಸೌಕರ್ಯ ಆಶ್ರಯ ಯೋಜನೆಯಡಿ ನಿವೇಶನ ರಹಿತರಿಗೆ ನಿವೇಶನ, ವಸತಿ ಸೌಕರ್ಯ ಕಲ್ಪಿಸಲು ಸೂಚನೆ ನೀಡಿದರು.

ADVERTISEMENT

ಸಫಾಯಿ ಕರ್ಮಚಾರಿ ಮಕ್ಕಳಿಗೆ ಅವರ ಆಸಕ್ತಿ ಹಾಗೂ ವಿದ್ಯಾರ್ಹತೆಗೆ ಅನುಗುಣವಾಗಿ ಕೌಶಲ ತರಬೇತಿ ಆಯೋಜಿಸಲು ಒಂದು ವಾರದ ಒಳಗಾಗಿ ಅರ್ಹ ಅಭ್ಯರ್ಥಿಗಳ ಪಟ್ಟಿ ಸಿದ್ಧಪಡಿಸಿ ಸಲ್ಲಿಸುವಂತೆ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಕರಿಗೆ ಸೂಚನೆ ನೀಡಿದರು.

ಹಾವೇರಿ, ರಾಣೆಬೆನ್ನೂರು ನಗರದಲ್ಲಿ ಕುಡಿಯುವ ನೀರು, ಒಳಚರಂಡಿ ವ್ಯವಸ್ಥೆ, ಶೌಚಾಲಯ ಸ್ವಚತೆ ಕುರಿತಂತೆ ವ್ಯವಸ್ಥಿತವಾಗಿ ಕಾರ್ಯ ನಿರ್ವಹಿಸಬೇಕು. ಹಾವೇರಿ ನಗರದ ಸ್ವಚ್ಛತೆ, ಒಳಚರಂಡಿ ವ್ಯವಸ್ಥೆ ಹಾಗೂ ಶುದ್ಧ ಕುಡಿಯುವ ನೀರಿನ ಪೂರೈಕೆ ಕುರಿತಂತೆ ಪ್ರಸ್ತಾವ ಸಿದ್ಧಪಡಿಸಲು ಸೂಚಿಸಿದರು.

ಕಾಮಗಾರಿ ಗುತ್ತಿಗೆಯಲ್ಲಿ ಮಿಸಲಾತಿ:ಸರ್ಕಾರದ ನಿಯಮದಂತೆ ವಿವಿಧ ಕಾಮಗಾರಿಗಳ ಗುತ್ತಿಗೆಯಲ್ಲಿ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಗುತ್ತಿಗೆದಾರರಿಗೆ ಮೀಸಲಿರಿಸುವಂತೆ ಲೋಕೋಪಯೋಗಿ, ನಗರಾಭಿವೃಧ್ಧಿ ಕೋಶ, ನೀರಾವರಿ ಇಲಾಖೆ ಸೇರಿದಂತೆ ವಿವಿಧ ಇಲಾಖಾಧಿಕಾರಿಗಳಿಗೆ ಜಿಲ್ಲಾಧಿಕಾರಿ ಸಂಜಯ ಶೆಟ್ಟಣ್ಣವರ ಸೂಚನೆ ನೀಡಿದರು.

ಸಭೆಯಲ್ಲಿ ಜಾಗೃತಿ ಸಮಿತಿಯ ಸದಸ್ಯರು ಜಿಲ್ಲೆಯ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗಗಳ ಜನರ ಹಲವು ಕುಂದುಕೊರತೆಗಳನ್ನು ಸಭೆಯ ಗಮನಕ್ಕೆ ತಂದರು.

ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಹನುಮಂತರಾಯ, ಹೆಚ್ಚುವರಿ ಪೊಲೀಸ್ ವರಿಷ್ಟಾಧಿಕಾರಿ ವಿಜಯಕುಮಾರ ಸಂತೋಷ, ಸಮಾಜ ಕಲ್ಯಾಣ ಇಲಾಖೆ ಉಪರ್ನೀಶಕ ಜಗದೀಶ ಹೆಬ್ಬಳ್ಳಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.