ADVERTISEMENT

ಗ್ರಾಮೀಣ ಸಾಕ್ಷರತೆಗೆ ಶ್ರಮಿಸಿ: ಸಿಇಒ

​ಪ್ರಜಾವಾಣಿ ವಾರ್ತೆ
Published 8 ಸೆಪ್ಟೆಂಬರ್ 2020, 16:11 IST
Last Updated 8 ಸೆಪ್ಟೆಂಬರ್ 2020, 16:11 IST
ಹಾವೇರಿ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ವತಿಯಿಂದ ಮಂಗಳವಾರ ನಡೆದ 54ನೇ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯಲ್ಲಿ ಸಿಇಒ ರಮೇಶ ದೇಸಾಯಿ ಅವರು ಬೋಧಕರೊಬ್ಬರಿಗೆ ಪ್ರಶಸ್ತಿ ಪತ್ರ ವಿತರಿಸಿದರು 
ಹಾವೇರಿ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ವತಿಯಿಂದ ಮಂಗಳವಾರ ನಡೆದ 54ನೇ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯಲ್ಲಿ ಸಿಇಒ ರಮೇಶ ದೇಸಾಯಿ ಅವರು ಬೋಧಕರೊಬ್ಬರಿಗೆ ಪ್ರಶಸ್ತಿ ಪತ್ರ ವಿತರಿಸಿದರು    

ಹಾವೇರಿ: ‘ಗ್ರಾಮೀಣ ಭಾಗದಲ್ಲಿ ಸಾಕ್ಷರತಾ ಚಟುವಟಿಕೆಗಳಿಗೆ ಹೆಚ್ಚಿನ ಆದ್ಯತೆ ನೀಡೋಣ. ಜಿಲ್ಲೆಯಲ್ಲೂ ನೂರರಷ್ಟು ಸಾಕ್ಷರತಾ ಸಾಧನೆಗೆ ಶ್ರಮಿಸೋಣ’ ಎಂದು ಜಿಲ್ಲಾ ಪಂಚಾಯಿತಿ ಸಿಇಒ ರಮೇಶ ದೇಸಾಯಿ ಹೇಳಿದರು.

ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ವಯಸ್ಕರ ಶಿಕ್ಷಣ ಇಲಾಖೆ ವತಿಯಿಂದ ಮಂಗಳವಾರ ನಡೆದ 54ನೇ ಅಂತರರಾಷ್ಟ್ರೀಯ ಸಾಕ್ಷರತಾ ದಿನಾಚರಣೆಯ ಧ್ವಜಾರೋಹಣ ನೆರವೇರಿಸಿ ಅವರು ಮಾತನಾಡಿದರು. ಸರ್ಕಾರದ ಪ್ರಯತ್ನದಿಂದ ದೇಶದಲ್ಲಿ ಅನಕ್ಷರತೆಯ ಪ್ರಮಾಣ ಇಳಿಮುಖವಾಗಿ ಸಾಕ್ಷರತೆಯ ಪ್ರಮಾಣ ಗಣನೀಯವಾಗಿ ಹೆಚ್ಚಳವಾಗಿದೆ ಎಂದರು.

‘ಜಿಲ್ಲೆಯಲ್ಲಿ ಸಾಕ್ಷರತಾ ಪ್ರಮಾಣವನ್ನು ಹೆಚ್ಚಳ ಮಾಡುವ ನಿಟ್ಟಿನಲ್ಲಿ ಗ್ರಾಮ ಪಂಚಾಯಿತಿವಾರು ಸಾಕ್ಷರತಾ ಕಾರ್ಯಕ್ರಮವನ್ನು ಜಾರಿಗೊಳಿಸಲಾಗಿದೆ. ಅಕ್ಷರ ಕಲಿಕೆಗೆ ಮನೆ– ಮನೆಗೆ ಭೇಟಿ ನೀಡಿ ನವ ಸಾಕ್ಷರರನ್ನಾಗಿಸಿ ಮುಖ್ಯವಾಹಿನಿಗೆ ತರುವಂತಹ ಕೆಲಸವನ್ನು ನಿರಂತರವಾಗಿ ಮಾಡಿಕೊಳ್ಳುತ್ತಾ ಬರಲಾಗಿದೆ’ ಎಂದು ಹೇಳಿದರು.

ADVERTISEMENT

ಸಾಂಕೇತಿಕವಾಗಿ ಐದು ಜನ ನವ ಸಾಕ್ಷರರಿಗೆ ಕಲಿಕಾ ಪ್ರಮಾಣ ಪತ್ರ ವಿತರಿಸಿದರು. ಡಿವೈಎಸ್ಪಿ ವಿಜಯಕುಮಾರ ಸಂತೋಷ, ಡಿ.ಡಿ.ಪಿ.ಐ ಅಂದಾನೆಪ್ಪ ವಡಗೇರಿ, ಜಿಲ್ಲಾ ವಯಸ್ಕರ ಶಿಕ್ಷಣಾಧಿಕಾರಿ ಬಸನಗೌಡ ಪಾಟೀಲ, ಸರ್ವ ಶಿಕ್ಷಣ ಅಭಿಯಾನದ ಎಸ್.ಎಸ್ ಅಡಿಗ, ವಿಷಯ ಪರಿವೀಕ್ಷಕರಾದ ದೇವೆಂದ್ರಪ್ಪ ಬಸಮ್ಮನವರ, ಮಂಜಪ್ಪ ಆರ್, ಈರಪ್ಪ ಲಮಾಣಿ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.