ADVERTISEMENT

ಹಾವೇರಿ | ಪಿಯುಸಿ ಪರೀಕ್ಷೆಯಲ್ಲಿ ಅನ್ನುತ್ತೀರ್ಣ: ವಿದ್ಯಾರ್ಥಿನಿ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 8 ಏಪ್ರಿಲ್ 2025, 17:00 IST
Last Updated 8 ಏಪ್ರಿಲ್ 2025, 17:00 IST
<div class="paragraphs"><p>ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)</p></div>

ಆತ್ಮಹತ್ಯೆ (ಪ್ರಾತಿನಿಧಿಕ ಚಿತ್ರ)

   

ಹಾವೇರಿ: ‘ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಅನುತ್ತೀರ್ಣಗೊಂಡಿದ್ದಕ್ಕೆ ಬೇಸರಗೊಂಡಿದ್ದರು’ ಎನ್ನಲಾದ ಕಾವ್ಯಾ ಬಸಪ್ಪ ಲಮಾಣಿ (18) ಎಂಬುವವರು ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಹಂಸಬಾವಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

‘ಹಿರೇಕೆರೂರ ತಾಲ್ಲೂಕಿನ ಚಿನ್ನಮುಳಗುಂದ ತಾಂಡಾದ ನಿವಾಸಿ ಕಾವ್ಯಾ, ದ್ವಿತೀಯ ಪಿಯುಸಿ ವಿದ್ಯಾರ್ಥಿನಿ. ಅವರ ಸಾವಿನ ಸಂಬಂಧ ಪೋಷಕರು ದೂರು ನೀಡಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ’ ಎಂದು ಹಂಸಬಾವಿ ಠಾಣೆ ಪೊಲೀಸರು ತಿಳಿಸಿದರು.

ADVERTISEMENT

‘ವಿಜ್ಞಾನ ವಿಭಾಗದಲ್ಲಿ ಓದುತ್ತಿದ್ದ ವಿದ್ಯಾರ್ಥಿನಿ ಕಾವ್ಯಾ, ನಾಲ್ಕು ವಿಷಯದಲ್ಲಿ ಅನ್ನುತ್ತೀರ್ಣಗೊಂಡಿದ್ದರು. ಮಂಗಳವಾರ ಫಲಿತಾಂಶ ಬರುತ್ತಿದ್ದಂತೆ ಬೇಸರಗೊಂಡಿದ್ದ ಅವರು, ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿರುವುದಾಗಿ ಗೊತ್ತಾಗಿದೆ’ ಎಂದು ಪೊಲೀಸರು ಹೇಳಿದರು

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.