ADVERTISEMENT

ಬಸ್‌ ಸೌಲಭ್ಯಕ್ಕಾಗಿ ವಿದ್ಯಾರ್ಥಿಗಳ ಪ್ರತಿಭಟನೆ

​ಪ್ರಜಾವಾಣಿ ವಾರ್ತೆ
Published 4 ಫೆಬ್ರುವರಿ 2021, 5:06 IST
Last Updated 4 ಫೆಬ್ರುವರಿ 2021, 5:06 IST
ಸವಣೂರ ತಾಲ್ಲೂಕು ಹೂವಿನಶಿಗ್ಲಿಗೆ ಬಸ್‌ ಸೌಲಭ್ಯ ಕಲ್ಪಿಸಬೇಕು ಎಂದು ಕಾಲೇಜು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಬುಧವಾರ ಹಾವೇರಿ ಸಾರಿಗೆ ಬಸ್‌ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು
ಸವಣೂರ ತಾಲ್ಲೂಕು ಹೂವಿನಶಿಗ್ಲಿಗೆ ಬಸ್‌ ಸೌಲಭ್ಯ ಕಲ್ಪಿಸಬೇಕು ಎಂದು ಕಾಲೇಜು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಬುಧವಾರ ಹಾವೇರಿ ಸಾರಿಗೆ ಬಸ್‌ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು   

ಹಾವೇರಿ: ಸವಣೂರ ತಾಲ್ಲೂಕು ಹೂವಿನಶಿಗ್ಲಿಗೆ ಬಸ್‌ ಸೌಲಭ್ಯ ಕಲ್ಪಿಸಬೇಕು ಎಂದು ಒತ್ತಾಯಿಸಿ ಕಾಲೇಜು ವಿದ್ಯಾರ್ಥಿಗಳು ಮತ್ತು ಗ್ರಾಮಸ್ಥರು ಬುಧವಾರ ಸಾರಿಗೆ ಸಂಸ್ಥೆ ಬಸ್‌ ನಿಲ್ದಾಣದಲ್ಲಿ ಪ್ರತಿಭಟನೆ ನಡೆಸಿದರು.

ಸಾರಿಗೆ ಬಸ್‌ಗಳನ್ನು ಅರ್ಧ ಗಂಟೆ ತಡೆದ ವಿದ್ಯಾರ್ಥಿಗಳು, ಬಸ್‌ ಕೊರತೆಯಿಂದ ಆಗುತ್ತಿರುವ ಸಮಸ್ಯೆಗಳ ಬಗ್ಗೆ ಆಕ್ರೋಶ ವ್ಯಕ್ತಪಡಿಸಿದರು. ಹಾವೇರಿಯಿಂದ ಕಡಕೋಳ ಮಾರ್ಗವಾಗಿ ಹೂವಿನಶಿಗ್ಲಿಗೆ ಸಂಜೆ 5 ಗಂಟೆಗೆ ಬಸ್‌ ಬಿಡಬೇಕು. ಇದರಿಂದ ಕಾಲೇಜು ವಿದ್ಯಾರ್ಥಿಗಳು ಊರು ತಲುಪಲು ಅನುಕೂಲವಾಗುತ್ತದೆ ಎಂದು ಒತ್ತಾಯಿಸಿದರು.

ಸಮರ್ಪಕ ಬಸ್‌ ಸೌಲಭ್ಯವಿಲ್ಲದ ಕಾರಣ ಕಾಲೇಜಿಗೆ ಬಂದು ಹೋಗಲು ತೀವ್ರ ಸಮಸ್ಯೆಯಾಗಿದೆ. ಈಗಾಗಲೇ ಎರಡು ಬಾರಿ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ.ಬಸ್‌ಪಾಸ್‌ ಇರುವುದರಿಂದ ಇತರ ವಾಹನಗಳಿಗೆ ಹೋಗಲು ಸಾಧ್ಯವಿಲ್ಲ. ಹಾಗಾಗಿ ಬಸ್‌ ಸೌಲಭ್ಯ ಕಲ್ಪಿಸಿ ಎಂದು ಸಾರಿಗೆ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.