ADVERTISEMENT

ಹಾವೇರಿ: ಭಾನುವಾರ ಸಂಪೂರ್ಣ ಲಾಕ್‍ಡೌನ್

ಜಿಲ್ಲೆಯಾದ್ಯಂತ ರಾತ್ರಿ 8ರಿಂದ ಬೆಳಿಗ್ಗೆ 5ರವರೆಗೆ ಕರ್ಫ್ಯೂ: ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ

​ಪ್ರಜಾವಾಣಿ ವಾರ್ತೆ
Published 29 ಜೂನ್ 2020, 14:12 IST
Last Updated 29 ಜೂನ್ 2020, 14:12 IST
ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ 
ಕೃಷ್ಣ ಬಾಜಪೇಯಿ, ಜಿಲ್ಲಾಧಿಕಾರಿ    

ಹಾವೇರಿ: ಜಿಲ್ಲೆಯಲ್ಲಿ ಕೊರೊನಾ ಸೋಂಕು ಹರಡದಂತೆ ಸೂಕ್ತ ಮುಂಜಾಗ್ರತಾ ಕ್ರಮಗಳನ್ನು ಕೈಗೊಳ್ಳುವ ನಿಟ್ಟಿನಲ್ಲಿ ಸಾರ್ವಜನಿಕರ ಆರೋಗ್ಯದ ಹಿತದೃಷ್ಟಿಯಿಂದ ಜೂನ್ 28ರ ಮಧ್ಯರಾತ್ರಿಯಿಂದ ಜಿಲ್ಲೆಯಾದ್ಯಂತ ಪ್ರತಿ ರಾತ್ರಿ 8ರಿಂದ ಬೆಳಿಗ್ಗೆ 5ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಿ ಜಿಲ್ಲಾಧಿಕಾರಿ ಕೃಷ್ಣ ಬಾಜಪೇಯಿ ಆದೇಶ ಹೊರಡಿಸಿದ್ದಾರೆ.

ಈ ಕರ್ಫ್ಯೂ ಅವಧಿಯಲ್ಲಿ ಅತ್ಯಗತ್ಯ ಚಟುವಟಿಕೆಗಳನ್ನು ಹೊರತುಪಡಿಸಿ ಉಳಿದಂತೆ ವ್ಯಕ್ತಿಗಳ ಚಲನೆಯನ್ನು ಕಟ್ಟುನಿಟ್ಟಾಗಿ ನಿಷೇಧಿಸಲಾಗಿದೆ. ಜುಲೈ 5, ಜುಲೈ 12, ಜುಲೈ 19, ಜುಲೈ 26 ಹಾಗೂ ಆಗಸ್ಟ್‌ 2ರ ಭಾನುವಾರಗಳಂದು ಜಿಲ್ಲೆಯಾದ್ಯಂತ ಸಂಪೂರ್ಣಲಾಕ್‍ಡೌನ್ ಇರುತ್ತದೆ. ಆದರೆ ಅಗತ್ಯ ಸರಕು ಸಾಗಾಣಿಕೆಗೆ ಯಾವುದೇ ನಿರ್ಬಂಧ ಇರುವುದಿಲ್ಲ ಎಂದು ತಿಳಿಸಿದ್ದಾರೆ.

ಜಿಲ್ಲೆಯಾದ್ಯಂತ ಕರ್ತವ್ಯ ನಿರ್ವಹಿಸುವ ರಾಜ್ಯ ಸರ್ಕಾರದ ಎಲ್ಲ ಇಲಾಖೆಗಳು, ಕಚೇರಿಗಳು, ಬೋರ್ಡುಗಳು ಮತ್ತು ಕಾರ್ಫೋರೇಷನ್‍ಗಳು (ತುರ್ತು ಮತ್ತು ಅಗತ್ಯ ಸೇವೆಗಳನ್ನು ಒದಗಿಸುವಂತಹ ಇಲಾಖೆಗಳು, ಕಚೇರಿಗಳು, ಬೋರ್ಡುಗಳು ಮತ್ತು ಕಾರ್ಪೋರೇಷನ್‍ಗಳನ್ನು ಹೊರತುಪಡಿಸಿ) ಈಗಿರುವ 2ನೇ ಶನಿವಾರ ಮತ್ತು 4ನೇ ಶನಿವಾರ ಸೇರಿದಂತೆ ಜುಲೈ 10ರಿಂದ ಎಲ್ಲಾ ಶನಿವಾರಗಳಂದು ಆಗಸ್ಟ್‌ 8ರವರೆಗೆ ಮುಚ್ಚಿರುತ್ತವೆ ಎಂದು ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.