ADVERTISEMENT

ಅ.2ರವರೆಗೆ ‘ಸ್ವಚ್ಛತಾ ಹಿ ಸೇವಾ’ ಆಂದೋಲನ: ಮೊಹಮ್ಮದ್‌ ರೋಶನ್‌

​ಪ್ರಜಾವಾಣಿ ವಾರ್ತೆ
Published 23 ಸೆಪ್ಟೆಂಬರ್ 2022, 13:42 IST
Last Updated 23 ಸೆಪ್ಟೆಂಬರ್ 2022, 13:42 IST
ಹಾವೇರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೊತೆ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ‘ಸ್ವಚ್ಛತಾ ಹಿ ಸೇವಾ’ ಕಾರ್ಯಕ್ರಮದಲ್ಲಿ ಸಿಇಒ ಮೊಹಮ್ಮದ್‌ ರೋಶನ್‌ ಮಾತನಾಡಿದರು. ಜಿ.ಪಂ. ಉಪ ಕಾರ್ಯದರ್ಶಿ ಎಸ್.ಬಿ.ಮುಳ್ಳಳ್ಳಿ, ಸಹಾಯಕ ಕಾರ್ಯದರ್ಶಿ ಜಾಫರ್ ಶರೀಫ್ ಸುತಾರ ಇದ್ದಾರೆ 
ಹಾವೇರಿ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೊತೆ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ‘ಸ್ವಚ್ಛತಾ ಹಿ ಸೇವಾ’ ಕಾರ್ಯಕ್ರಮದಲ್ಲಿ ಸಿಇಒ ಮೊಹಮ್ಮದ್‌ ರೋಶನ್‌ ಮಾತನಾಡಿದರು. ಜಿ.ಪಂ. ಉಪ ಕಾರ್ಯದರ್ಶಿ ಎಸ್.ಬಿ.ಮುಳ್ಳಳ್ಳಿ, ಸಹಾಯಕ ಕಾರ್ಯದರ್ಶಿ ಜಾಫರ್ ಶರೀಫ್ ಸುತಾರ ಇದ್ದಾರೆ    

ಹಾವೇರಿ: ಕೇಂದ್ರ ಕುಡಿಯವ ನೀರು ಮತ್ತು ನೈರ್ಮಲ್ಯ ಇಲಾಖೆ, ಜಲಶಕ್ತಿ ಮಂತ್ರಾಲಯವು ಗ್ರಾಮಗಳಲ್ಲಿ ಸಂಪೂರ್ಣ ನೈರ್ಮಲ್ಯ ಕಾಪಾಡುವ ನಿಟ್ಟಿನಲ್ಲಿ ಸೆ.15ರಿಂದ ಅ.2ರವರೆಗೆ ರಾಷ್ಟ್ರವ್ಯಾಪ್ತಿ ‘ಸ್ವಚ್ಛತಾ ಹಿ ಸೇವಾ’ʼ ಆಂದೋನ ಆಯೋಜಿಸಲಾಗಿದೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ಮೊಹಮ್ಮದ್‌ ರೋಶನ್‌ ಹೇಳಿದರು.

ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶುಕ್ರವಾರ ಜಿಲ್ಲೆಯ ಗ್ರಾಮ ಪಂಚಾಯಿತಿ ಅಧ್ಯಕ್ಷರು, ಉಪಾಧ್ಯಕ್ಷರು ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಜೊತೆ ಸ್ವಚ್ಛ ಭಾರತ್ ಮಿಷನ್ ಯೋಜನೆಯಡಿ ‘ಸ್ವಚ್ಛತಾ ಹಿ ಸೇವಾ’ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಅ.2 ರವರೆಗೆ ಜಿಲ್ಲೆಯ 223 ಗ್ರಾಮ ಪಂಚಾಯಿತಿ ವ್ಯಾಪ್ತಿಯ ಶಾಲೆ, ಅಂಗನವಾಡಿ, ಸರ್ಕಾರಿ ಕಟ್ಟಡ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಗ್ರಾಮ ಪಂಚಾಯಿತಿ ಚುನಾಯಿತ ಪ್ರತಿನಿಧಿಗಳು, ಅಂಗನವಾಡಿ ಕಾರ್ಯಕರ್ತೆಯರು, ಆಶಾ ಕಾರ್ಯಕರ್ತೆಯರು, ಸ್ವಸಹಾಯ ಸಂಘದವರು ಹಾಗೂ ಗ್ರಾಮ ಪಂಚಾಯಿತಿ ಅಧಿಕಾರಿ ಹಾಗೂ ಸಿಬ್ಬಂದಿ ಶ್ರಮದಾನದ ಮೂಲಕ ಸ್ವಚ್ಛತೆ ಕಾರ್ಯವನ್ನು ಕೈಗೊಳ್ಳಬೇಕು ಎಂದರು.

ADVERTISEMENT

ನದಿ ಮೂಲಗಳಲ್ಲಿ ಸಸಿ ನೆಡುವುದು ಹಾಗೂ ಮನೆಯ ಹಂತದಲ್ಲಿಯೇ ಹಸಿ ಕಸ ಹಾಗೂ ಒಣ ಕಸ ಬೇರ್ಪಡಿಸುವ ಕುರಿತು ಮನೆ–ಮನೆಗೆ ಭೇಟಿ ನೀಡಿ ಮಾಹಿತಿ ನೀಡಬೇಕು. ಈ ಕುರಿತು ಪ್ರತಿಜ್ಞಾ ವಿಧಿ ಸ್ವೀಕರಿಸುವ ಕಾರ್ಯಕ್ರಮ ಈಗಾಗಲೇ ಜಿಲ್ಲೆಯಲ್ಲಿನ ಗ್ರಾಮ ಪಂಚಾಯಿತಿಗಳಲ್ಲಿ ಪ್ರಾರಂಭವಾಗಿದೆ ಎಂದರು.

ಸ್ವಚ್ಛತಾ ಹೀ ಸೇವಾ ಆಂದೋಲನದ ಪ್ರತಿಜ್ಞಾ ವಿಧಿ ಬೋಧಿಸಲಾಯಿತು. ಕಾರ್ಯಕ್ರಮದಲ್ಲಿ ಜಿ.ಪಂ. ಉಪ ಕಾರ್ಯದರ್ಶಿ ಹಾಗೂ ಜಿಲ್ಲಾ ನೋಡಲ್ ಅಧಿಕಾರಿ ಎಸ್.ಬಿ.ಮುಳ್ಳಳ್ಳಿ, ಸಹಾಯಕ ಕಾರ್ಯದರ್ಶಿ ಜಾಫರ್ ಶರೀಫ್ ಸುತಾರ, ಸಮಾಲೋಚಕರಾದ ಸೀಮಾ ರಾಮ, ಗೋವಿಂದ ಬಾರಿಕರ, ಸುನಿತಾ ನಾಗನಗೌಡ್ರ, ರಕ್ಷಾ ಅಣ್ಣಿಗೇರಿ, ದೀಪಕ ನಾಯ್ಕ, ರಾಜೇಶ್ವರಿ ಗಡಾದ ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.