
ಪ್ರಜಾವಾಣಿ ವಾರ್ತೆ
ತಡಸ: ಗ್ರಾಮದಲ್ಲಿರುವ ವೀರಭದ್ರೇಶ್ವರ ಗದ್ದುಗೆಯ ಗುಗ್ಗಳ ಮತ್ತು ರಥೋತ್ಸವ ಸಕಲ ವಾದ್ಯಮೇಳ ವೈಭವದೊಂದಿಗೆ ಅನೇಕ ಭಕ್ತರ ನಡುವೆ ಅದ್ದೂರಿಯಾಗಿ ನಡೆಯಿತು.
ಮಂಗಳವಾರ ವೀರಭದ್ರೇಶ್ವರ ದೇವರ ಮೂರ್ತಿಗೆ ಮಹಾರುದ್ರಾಭಿಷೇಕ, ವಿಶೇಷ ಪೂಜೆ, ಗುಗ್ಗಳೋತ್ಸವ ವೀರ ಪುರವಂತರೊಂದಿಗೆ ಸಕಲ ವಾದ್ಯ ವೈಭವಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಂಚರಿಸಿತು. ಮ.2ಕ್ಕೆ ತೊಟ್ಟಿಲೋತ್ಸವ ಹಾಗೂ ಸಂಜೆ 5ಕ್ಕೆ ರಥೋತ್ಸವ ಜರುಗಿತು.
ಧಾರವಾಡ, ಉತ್ತರ ಕನ್ನಡ, ದಾವಣಗೆರೆ, ಗದಗ, ಬೆಳಗಾವಿ ಜಿಲ್ಲೆಯ ಭಕ್ತರು ರಥೋತ್ಸವಕ್ಕೆ ಆಗಮಿಸಿದ್ದರು.
ಜಂಗೀ ಬಯಲು ಕುಸ್ತಿ: ಫೆ.25 ರಿಂದ 27ರ ವರೆಗೆ ಜಂಗೀ ಬಯಲು ಕುಸ್ತಿ ಪಂದ್ಯಾವಳಿ ನಡೆಯಲಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.