
ಹಾನಗಲ್: ಮಾಜಿ ಸಚಿವ ದಿ.ಮನೋಹರ ತಹಸೀಲ್ದಾರ್ ಅವರ ಕಂಚಿನ ಪುತ್ಥಳಿಯ ಅನಾವರಣ ನ.21 ರಂದು ತಾಲ್ಲೂಕಿನ ಅಕ್ಕಿವಳ್ಳಿಯಲ್ಲಿ ನಡೆಯಲಿದೆ ಎಂದು ಮನೋಹರ ತಹಸೀಲ್ದಾರ್ ಅವರ ಪುತ್ರ, ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ರಾಘವೇಂದ್ರ ತಹಸೀಲ್ದಾರ್ ಹೇಳಿದರು.
ಅಂದು ಶುಕ್ರವಾರ ಬೆಳಿಗ್ಗೆ 10 ಗಂಟೆಗೆ ಅಕ್ಕಿವಳ್ಳಿ ಗ್ರಾಮದ ಮನೋಹರ ತಹಸೀಲ್ದಾರ್ ಫಾರ್ಮ್‌ಹೌಸ್‌ನಲ್ಲಿ ಅವರ ಪುತ್ಥಳಿ ಅನಾವರಣ ಹಾಗೂ ಪ್ರಥಮ ಪುಣ್ಯ ಸ್ಮರಣೋತ್ಸವ ನಡೆಯಲಿದೆ.
ಹುಬ್ಬಳ್ಳಿ ಮೂರುಸಾವಿರಮಠದ ಗುರುಸಿದ್ಧರಾಜಯೋಗೀಂದ್ರ ಸ್ವಾಮೀಜಿ, ಕನಕ ಗುರುಪೀಠದ ನಿರಂಜನಾನಂದಪುರಿ ಸ್ವಾಮೀಜಿ, ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದಪುರಿ ಶ್ರೀಗಳು ಸೇರಿದಂತೆ ವಿವಿಧ ಮಠಾಧೀಶರು ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.
ಸಂಸದ ಬಸವರಾಜ ಬೊಮ್ಮಾಯಿ, ವಿಧಾನಸಭೆ ಉಪಾಧ್ಯಕ್ಷ ರುದ್ರಪ್ಪ ಲಮಾಣಿ, ಮಾಜಿ ಸಚಿವ ಬಿ.ಸಿ.ಪಾಟೀಲ, ಮಾಜಿ ಶಾಸಕ ಶಿವರಾಜ ಸಜ್ಜನ, ವಿರುಪಾಕ್ಷಪ್ಪ ಬಳ್ಳಾರಿ, ಅರುಣಕುಮಾರ ಪೂಜಾರ, ಹೆಸ್ಕಾಂ ಅಧ್ಯಕ್ಷ ಅಜ್ಜಂಪೀರ ಖಾದ್ರಿ, ಗಣ್ಯರಾದ ಗವಿಸಿದ್ದಪ್ಪ ಹೊಸಮನಿ, ಭರತ ಬೊಮ್ಮಾಯಿ, ಅಜ್ಜಯ್ಯಸ್ವಾಮಿ ಆರಾಧ್ಯಮಠ, ಮಹೇಶಕುಮಾರ ಕಮಡೊಳ್ಳಿ, ಆರ್.ಬಿ.ಪಾಟೀಲ, ಕೆ.ಎಲ್.ದೇಶಪಾಂಡೆ, ನಾಗರಾಜ ಉದಾಸಿ ಪಾಲ್ಗೊಳ್ಳುವರು ಎಂದು ತಿಳಿಸಿದರು.
ವೆಂಕಟೇಶ ತಹಸೀಲ್ದಾರ್, ಅಣ್ಣಪ್ಪ ಚಾಕಾಪುರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.