ADVERTISEMENT

ಅಂಬಿಗರ ಸಮಾಜಕ್ಕೆ ಸಚಿವ ಸ್ಥಾನ ನೀಡಿ: ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 5 ಆಗಸ್ಟ್ 2021, 15:16 IST
Last Updated 5 ಆಗಸ್ಟ್ 2021, 15:16 IST
ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ  
ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ     

ಗುತ್ತಲ (ಹಾವೇರಿ ಜಿಲ್ಲೆ): ‘ರಾಜ್ಯದಲ್ಲಿ 50 ರಿಂದ 60 ಲಕ್ಷ ಜನಸಂಖ್ಯೆ ಇರುವ ಅಂಬಿಗ ಸಮುದಾಯಕ್ಕೆ ಸಂಪುಟದಲ್ಲಿ ಸಚಿವ ಸ್ಥಾನ ನೀಡದೇ ಇರುವುದು ಬೇಸರ ಮೂಡಿಸಿದೆ. ಸಚಿವ ಸ್ಥಾನ ಕೊಡದೆ ಇದ್ದರೆ ಮುಂದಿನ ದಿನಗಳಲ್ಲಿ ಪಕ್ಷಕ್ಕೆ ನಮ್ಮ ಸಮಾಜದಿಂದ ತಕ್ಕ ಪಾಠ ಕಲಿಸಬೇಕಾಗುತ್ತದೆ’ ಎಂದು ನರಸೀಪುರದ ನಿಜಶರಣ ಅಂಬಿಗರ ಚೌಡಯ್ಯನ ಗುರುಪೀಠದ ಪೀಠಾಧ್ಯಕ್ಷ ಶಾಂತಭೀಷ್ಮ ಚೌಡಯ್ಯ ಸ್ವಾಮೀಜಿ ಎಚ್ಚರಿಕೆ ನೀಡಿದರು.

ಗುರುವಾರ ಅಂಬಿಗರ ಚೌಡಯ್ಯ ಗುರುಪೀಠದಲ್ಲಿ ಪತ್ರಿಕಾಗೊಷ್ಠಿಯಲ್ಲಿ ಮಾತನಾಡಿದ ಅವರು, ‘ಕೊಲಿ, ಕಬ್ಬಲಿಗ, ಅಂಬಿಗ, ಬೆಸ್ತ, ಗಂಗಾಮತ,ಮೋಗವಿರ ಮುಂತಾದ 39 ಪರ್ಯಾಯ ಪದಗಳಿಂದ ಗುರುತಿಸಲಾಗುವಹಿಂದುಳಿದ ಅಂಬಿಗ ಸಮುದಾಯಕ್ಕೆ ಸಂಪುಟದಲ್ಲಿ ಸಚಿವ ಸ್ಥಾನ ನೀಡದಿರುವುದು ಸಮುದಾಯಕ್ಕೆ ಅತ್ಯಂತ ಅಸಮಾಧಾನ ಮೂಡಿಸಿದೆ’ ಎಂದರು.

‘ಅಂಬಿಗ ಸಮಾಜದಲ್ಲಿ ಇಬ್ಬರು ವಿಧಾನಪರಿಷತ್ ಸದಸ್ಯರು ಮತ್ತು ಒಬ್ಬರು ಶಾಸಕರಲ್ಲಿ ಒಬ್ಬರಿಗೆ ಕಡ್ಡಾಯವಾಗಿ ಸಚಿವ ಸ್ಥಾನ ಕೊಡಬೇಕು. ಹಿಂದಿನ ಸರ್ಕಾರದಲ್ಲಿ ಅಂಬಿಗ ಸಮುದಾಯಕ್ಕೆ ಎರಡು ಸಚಿವ ಸ್ಥಾನಗಳನ್ನು ನೀಡಿ ಉತ್ತಮ ಸ್ಥಾನಮಾನ ನೀಡಿತ್ತು. ಆದರೆ, ಬಿಜೆಪಿ ಸರ್ಕಾರ ಹಿಂದುಳಿದ ಅಂಬಿಗ ಸಮುದಾಯಕ್ಕೆ ಸಚಿವ ಸ್ಥಾನ ನೀಡದಿರುವುದು ಸಮಾಜದವರಿಗೆ ಅನ್ಯಾಯ ಮಾಡಿದಂತಾಗಿದೆ’ ಎಂದರು.

ADVERTISEMENT

‘ಕೂಡಲೇ ಸರ್ಕಾರ ಅಂಬಿಗ ಸಮಾಜಕ್ಕೆ ಸಚಿವ ಸ್ಥಾನ ನೀಡಿ ಸಚಿವ ಸ್ಥಾನದಿಂದ ವಂಚಿತಗೊಂಡಿರುವ ಸಮುದಾಯಕ್ಕೆ ನ್ಯಾಯ ಕೊಡಬೇಕು’ ಎಂದು ಆಗ್ರಹಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.