ADVERTISEMENT

ವಿವಿಧ ಬೇಡಿಕೆ ಈಡೇರಿಕೆಗೆ ಶಿಕ್ಷಕರ ಆಗ್ರಹ

​ಪ್ರಜಾವಾಣಿ ವಾರ್ತೆ
Published 19 ಮೇ 2021, 3:58 IST
Last Updated 19 ಮೇ 2021, 3:58 IST
ಹಾನಗಲ್‌ ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಹಶೀಲ್ದಾರ್‌ ಎರ‍್ರಿಸ್ವಾಮಿ ಪಿ.ಎಸ್‌ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು
ಹಾನಗಲ್‌ ತಾಲ್ಲೂಕಿನ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ತಹಶೀಲ್ದಾರ್‌ ಎರ‍್ರಿಸ್ವಾಮಿ ಪಿ.ಎಸ್‌ ಅವರಿಗೆ ಮನವಿಪತ್ರ ಸಲ್ಲಿಸಲಾಯಿತು   

ಹಾನಗಲ್: ಕೋವಿಡ್ ನಿರ್ವಹಣೆ ಕಾರ್ಯಕ್ಕೆ ನಿಯೋಜನೆಗೊಳ್ಳುವ ಪ್ರಾಥಮಿಕ ಶಾಲಾ ಶಿಕ್ಷಕರಿಗೆ ಪ್ರತಮ ಆದ್ಯತೆ ಮೇಲೆ ಲಸಿಕೆ ನೀಡಬೇಕು. ಶಿಕ್ಷಕರನ್ನು ಕೋವಿಡ್ ಸೇನಾನಿಗಳೆಂದು ಪರಿಗಣಿಸಬೇಕು ಎಂದು ಒತ್ತಾಯಿಸಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ತಾಲ್ಲೂಕು ಘಟಕದಿಂದ ತಹಶೀಲ್ದಾರ್, ತಾಲ್ಲೂಕು ಆರೋಗ್ಯಾಧಿಕಾರಿ ಮತ್ತು ತಾಲ್ಲೂಕು ಪಂಚಾಯ್ತಿ ಕಾರ್ಯನಿರ್ವಾಹಕ ಅಧಿಕಾರಿಗೆ ಮನವಿ ಸಲ್ಲಿಸಲಾಯಿತು.

ಈಗಾಗಲೇ ಕೋವಿಡ್ ವ್ಯಾಧಿಗೆ ಬಹಳಷ್ಟು ಶಿಕ್ಷಕರು ಬಲಿಯಾಗಿದ್ದಾರೆ. ಇದು ಶಿಕ್ಷಕ ವಲಯದಲ್ಲಿ ತಲ್ಲಣ ಮೂಡಿಸಿದೆ. ಭಯದ ವಾತಾವರಣ ನಿರ್ಮಾಣವಾಗಿದೆ. ಹೀಗಾಗಿ ಶಿಕ್ಷಕರ ರಕ್ಷಣೆಗೆ ಕ್ರಮ ಜರುಗಿಸಬೇಕು. ಆತ್ಮವಿಶ್ವಾಸ ತುಂಬುವ ಕೆಲಸ ಮಾಡಬೇಕು.

ಶಿಕ್ಷಕರ ಚಿಕಿತ್ಸೆ ಹಾಗೂ ಮರಣ ಹೊಂದಿದ ಶಿಕ್ಷಕರ ಕುಟುಂಬಕ್ಕೆ ಪರಿಹಾರ ಒದಗಿಸಬೇಕು. 55 ವರ್ಷ ಮೇಲ್ಪಟ್ಟ ಶಿಕ್ಷಕರನ್ನು ಕೊರೊನಾ ಕರ್ತವ್ಯದಿಂದ ಕೈಬಿಡಬೇಕು.

ADVERTISEMENT

ಶಿಕ್ಷಕರ ಚಿಕಿತ್ಸೆಗಾಗಿ ಪ್ರತ್ಯೇಕ ಕೊರೊನಾ ಆರೈಕೆ ಕೇಂದ್ರ ತೆರೆಯಬೇಕು ಎಂದು ಮನವಿ ಮಾಡಲಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ವಿಜಯೇಂದ್ರ ಯತ್ನಳ್ಳಿ, ತಾಲ್ಲೂಕು ಘಟಕದ ಅಧ್ಯಕ್ಷ ಎಂ.ಎಸ್.ಬಡಿಗೇರ, ಕಾರ್ಯದರ್ಶಿ ಶಿವಾನಂದ ಚಕ್ರಸಾಲಿ, ಎಂ.ಎ.ಜಾಗೀರ್‌ದಾರ್ ಇದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.