ADVERTISEMENT

ಟಿಇಟಿ ವಿರೋಧಿಸಿ 24ರಂದು ಪ್ರತಿಭಟನೆ: ಬಸವರಾಜ ಗುರಿಕಾರ

​ಪ್ರಜಾವಾಣಿ ವಾರ್ತೆ
Published 10 ನವೆಂಬರ್ 2025, 0:04 IST
Last Updated 10 ನವೆಂಬರ್ 2025, 0:04 IST
ಬಸವರಾಜ ಗುರಿಕಾರ
ಬಸವರಾಜ ಗುರಿಕಾರ   

ಹಾವೇರಿ: ‘ಸೇವಾನಿರತ ಶಿಕ್ಷಕರಿಗೆ ಟಿಇಟಿ (ಶಿಕ್ಷಕರ ಅರ್ಹತಾ ಪರೀಕ್ಷೆ) ನಿಗದಿಪಡಿಸುತ್ತಿರುವ ನಿರ್ಧಾರವನ್ನು ಕೇಂದ್ರ ಸರ್ಕಾರ ಕೈಬಿಡಬೇಕು’ ಎಂದು ಒತ್ತಾಯಿಸಿ ನವದೆಹಲಿಯ ಜಂತರ್‌ ಮಂತರ್‌ನಲ್ಲಿ ನವೆಂಬರ್ 24ರಂದು ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ’ ಎಂದು ಅಖಿಲ ಭಾರತ ಶಿಕ್ಷಕರ ಫೆಡರೇಷನ್‌ನ ರಾಷ್ಟ್ರೀಯ ಘಟಕದ ಅಧ್ಯಕ್ಷ ಬಸವರಾಜ ಗುರಿಕಾರ ತಿಳಿಸಿದರು. 

ಭಾನುವಾರ ಸುದ್ದಿಗಾರರ ಈ ವಿಷಯ ತಿಳಿಸಿದ ಅವರು, ‘ರಾಷ್ಟ್ರಮಟ್ಟದಲ್ಲಿ ಇದೇ ಮೊದಲ ಬಾರಿಗೆ ಪ್ರತಿಭಟನೆ ನಡೆದಿದ್ದು, ಎಲ್ಲ ರಾಜ್ಯಗಳ ಶಿಕ್ಷಕ ಪ್ರತಿನಿಧಿಗಳು ಭಾಗವಹಿಸಲಿದ್ದಾರೆ’ ಎಂದರು.

‘24ರಂದು ಸಾಂಕೇತಿಕವಾಗಿ ಪ್ರತಿಭಟನೆ ನಡೆಸಲಾಗುವುದು. ನಂತರ, ರಾಜ್ಯ, ಜಿಲ್ಲೆ ಹಾಗೂ ತಾಲ್ಲೂಕು ಮಟ್ಟದಲ್ಲಿಯೂ ಪ್ರತಿಭಟನೆಗಳು ನಡೆಯಲಿವೆ’ ಎಂದು ತಿಳಿಸಿದರು. 

ADVERTISEMENT

‘ಶಿಕ್ಷಕರ ಸೇವಾನುಭವವೇ ದೊಡ್ಡ ತರಬೇತಿಯಾಗಿದೆ. ಪರೀಕ್ಷೆ ನಡೆಸುವ ನಿರ್ಧಾರ ಹಿಂಪಡೆಯಬೇಕು. ಸುಪ್ರೀಂಕೋರ್ಟ್ ತೀರ್ಪು ಮರುಪರಿಶೀಲನೆ ಕೋರಿ ಅರ್ಜಿ ಸಲ್ಲಿಸಬೇಕು’ ಎಂದು ಆಗ್ರಹಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.